ಬಿಹಾರ: ನಿರ್ಣಾಯಕ ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ನವೆಂಬರ್ 14ರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದೂ, ಆರಂಭಿಕ ಪ್ರವೃತ್ತಿಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಹಲವಾರು ಸ್ಥಾನಗಳಲ್ಲಿ ಮುಂದಿದೆ ಎಂದು ಸೂಚಿಸುತ್ತದೆ.
ಬೆಳಿಗ್ಗೆ 11.30 ರ ವೇಳೆಗೆ ಟ್ರೆಂಡ್ಗಳ ಪ್ರಕಾರ ಎನ್ಡಿಎ 190 ಸ್ಥಾನಗಳಲ್ಲಿ ಮತ್ತು ಮಹಾಘಟಬಂಧನ್ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಕೂಡ 50 ಸ್ಥಾನಗಳನ್ನು ದಾಟಿ 84 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ರಾಘೋಪುರ ವಿಧಾನಸಭೆಯಲ್ಲಿ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಟಿಕೆಟ್ನಲ್ಲಿ ಚುನಾವಣೆಗೆ ಪಾದಾರ್ಪಣೆ ಮಾಡುತ್ತಿರುವ ಗಾಯಕಿ ಮೈಥಿಲಿ ಠಾಕೂರ್ ಅಲಿನಗರದಲ್ಲಿ ಮುನ್ನಡೆಯಲ್ಲಿದ್ದಾರೆ.
ಇದನ್ನೂ ಓದಿ: ತುಮಕೂರು | ಸರ್ವೆ ಕಾರ್ಯಕ್ಕೆ ರೈತರು ವಿರೋಧ; ಜಿಲ್ಲಾ ಆಡಳಿತದ ವಿರುದ್ಧ ಆಕ್ರೋಶ
ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಜನತಾದಳ (ಸಂಯುಕ್ತ) ಮುಖ್ಯಸ್ಥ ನಿತೀಶ್ ಕುಮಾರ್ ಅವರು ಸತತ ಐದನೇ ಅವಧಿಗೆ ಅಧಿಕಾರ ವಹಿಸಿಕೊಳ್ಳುತ್ತಾರೋ ಅಥವಾ ಸರ್ಕಾರದಲ್ಲಿ ಬದಲಾವಣೆ ಕಂಡುಬರುತ್ತದೆಯೋ ಎಂಬುದನ್ನು 243 ವಿಧಾನಸಭಾ ಸ್ಥಾನಗಳ ಮತದಾನದ ಫಲಿತಾಂಶಗಳು ನಿರ್ಧರಿಸಲಿವೆ .
ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯ ಬಲದ ವಿಧಾನಸಭೆಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯವು ಐತಿಹಾಸಿಕವಾಗಿ ಶೇ. 67.13 ರಷ್ಟು ಮತದಾನ ಮಾಡಿದೆ.
ಬಹುತೇಕ ಎಕ್ಸಿಟ್ ಪೋಲ್ಗಳು ಜೆಡಿಯು ಸಹ ಸೇರಿರುವ ಎನ್ಡಿಎ ಕ್ಲೀನ್ ಸ್ವೀಪ್ ಮಾಡುತ್ತದೆ ಎಂದು ಭವಿಷ್ಯ ನುಡಿದಿವೆ. ತೇಜಸ್ವಿ ಯಾದವ್ ಈ ಭವಿಷ್ಯವಾಣಿಗಳನ್ನು ತಳ್ಳಿಹಾಕಿ ಮಹಾಘಟಬಂಧನ್ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಹೇಳಿದ್ದಾರೆ.
ತೇಜಸ್ವಿ ಯಾದವ್ ಅವರಲ್ಲದೆ, ಎರಡೂ ಮೈತ್ರಿಕೂಟಗಳ ಪ್ರಮುಖ ಅಭ್ಯರ್ಥಿಗಳೆಂದರೆ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ, ಜನಶಕ್ತಿ ಜನತಾ ದಳ (ಜೆಜೆಡಿ) ನ ತೇಜ್ ಪ್ರತಾಪ್ ಮತ್ತು ಬಿಹಾರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಕುಮಾರ್.
ಇದನ್ನೂ ನೋಡಿ: ಪುಸ್ತಕ ಪರಿಚಯ | ನಿರಂಜನರ ಬದುಕು-ಬರಹಗಳ ಕತೆ – ಅನಂತ ಶಾಂದ್ರೇಯ Janashakthi Media
