ಹೊಸದಿಲ್ಲಿ: ಎನ್ಡಿಎ ಮೈತ್ರಿಕೂಟವು ಲೋಕಸಭೆ ಚುನಾವಣೆಯ ಬಳಿಕ ನಡೆದ ಏಳು ರಾಜ್ಯಗಳಲ್ಲಿನ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಭಾರಿ ಹಿನ್ನಡೆ ಕಂಡಿದ್ದು, ವಿರೋಧ ಪಕ್ಷಗಳ ಐಎನ್ಡಿಐಎ ಬಣ ಮೇಲುಗೈ ಸಾಧಿಸಿದೆ.
ಏಳು ರಾಜ್ಯಗಳಲ್ಲಿನ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯುತ್ತಿದ್ದು, ಐಎನ್ಡಿಐಎ ಮೈತ್ರಿಕೂಟವು 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಎನ್ಡಿಎ ಮೈತ್ರಿಕೂಟ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಪಡೆದಿದೆ.
ಈ ವಿಧಾನಸಭೆ ಉಪ ಚುನಾವಣೆಯನ್ನು ಬಿಜೆಪಿಯ ಅಗ್ನಿ ಪರೀಕ್ಷೆ ಎಂದು ಪರಿಗಣಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವಲ್ಲಿ ವಿಫಲವಾದ ಕಾರಣಕ್ಕೆ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿತ್ತು. ಆದರೂ ಎನ್ಡಿಎ ಮಿತ್ರ ಪಕ್ಷಗಳಿಂದ ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಿತ್ತು. ಈ ಚುನಾವಣೆ ಬಳಿಕ ನಡೆದ ಮೊದಲ ಉಪ ಚುನಾವಣೆಯಲ್ಲಿಯೂ ಬಿಜೆಪಿಗೆ ಆಘಾತ ಎದುರಾಗಿದೆ.
ಕಾಂಗ್ರೆಸ್ 04, ಟಿಎಂಸಿ 04, ಬಿಜೆಪಿ 02, ಎಎಪಿ 01, ಡಿಎಂಕೆ 01, ಪಕ್ಷೇತರರು 01 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಇದನ್ನು ಓದಿ : ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಿಬಿಐನಿಂದ ಕಿಂಗ್ಪಿನ್ ರಾಕಿ ಬಂಧನ
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಎಲ್ಲ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 2021ರ ವಿಧಾನಸಭೆ ಚುನಾವಣೆಯಲ್ಲಿ ರಾಯಗಂಜ್, ರಾಣಾಘಾಟ್ ದಕ್ಷಿಣ ಮತ್ತು ಬಾಗ್ಡಾ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು. ಮಣಿಕ್ತಾಲಾದಲ್ಲಿ ಟಿಎಂಸಿ ಗೆದ್ದಿತ್ತು. ಬಿಜೆಪಿ ಶಾಸಕರು ಬಳಿಕ ಟಿಎಂಸಿ ಸೇರ್ಪಡೆಯಾಗಿದ್ದರು.
ಉತ್ತರಾಖಂಡದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಹಿಮಾಚಲದ ಮೂರು ಕ್ಷೇತ್ರಗಳಲ್ಲಿ ಎರಡು ಕಾಂಗ್ರೆಸ್ ಒಂದರಲ್ಲಿ ಬಿಜೆಪಿ ಜಯಗಳಿಸಿದೆ.
ಪಂಜಾಬ್ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಎಎಪಿಯ ಮೋಹಿಂದರ್ ಭಗತ್ ಅವರು ಎದುರಾಳಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸುರಿಂದರ್ ಕೌರ್ ಅವರನ್ನು 37,325 ಮತಗಳಿಂದ ಸೋಲಿಸಿದ್ದಾರೆ. ಎಎಪಿ ಶಾಸಕ ಬಿಜೆಪಿ ಸೇರಿದ್ದರಿಂದ ಇಲ್ಲಿ ಉಪ ಚುನಾವಣೆ ನಡೆದಿತ್ತು.ʼ
ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಅಭ್ಯರ್ಥಿ ಅನ್ನಿಯೂರ್ ಶಿವ ಅವರು ವಿಕ್ರವಂಡಿ ವಿಧಾನಸಭೆ ಕ್ಷೇತ್ರದಲ್ಲಿ ಗೆಲುವು ಪಡೆದಿದ್ದಾರೆ. ಪಿಎಂಕೆ ಅಭ್ಯರ್ಥಿ ಸಿ ಅನ್ಬುಮಣಿ ಹಾಗೂ ನಾಮ್ ತಮಿಳರ್ ಕಚ್ಚಿಯ ಅಭಿನಯ ಕಣದಲ್ಲಿದ್ದರು.
ಬಿಹಾರದ ರೂಪೌಲಿ ಉಪ ಚುನಾವಣೆಯಲ್ಲಿ ಜೆಡಿಯು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ಅಮರ್ವಾರಾ ಕ್ಷೇತ್ರದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ್ದ ಕಮಲೇಶ್ ಶಾ ಗೆಲುವು ಸಾಧಿಸಿದ್ದಾರೆ.
ಇದನ್ನು ನೋಡಿ : NTA ಮಾಡಿದ ಎಡವಟ್ಟುಗಳು ಒಂದಲ್ಲ..! ಎರಡಲ್ಲ..!!Janashakthi Media