ಮೈಸೂರು: ಮೈಸೂರಿನ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು AIDSO ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಅಗತ್ಯ ಉಪನ್ಯಾಸಕರ ನೇಮಕಾತಿಗೆ ಹಾಗೂ ತರಗತಿಗಳನ್ನು ಸರಿಯಾಗಿ ನಡೆಸಲು ಹಾಗೂ ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಪ್ರಾರಂಭವಾಗಿ
ಇದನ್ನೂ ಓದಿ:ಮೂರು ವರ್ಷದ ಶೈಕ್ಷಣಿಕ ಪ್ರವೇಶ ಶುಲ್ಕ ಒಟ್ಟಿಗೆ ಕಟ್ಟಲು ಆದೇಶ: ಎಐಡಿಎಸ್‌ಒ ಪ್ರತಿಭಟನೆ
ಕಾಲೇಜು ಪ್ರಾರಂಭವಾಗಿ ಒಂದು ತಿಂಗಳು ಕಳೆದರು ಉಪನ್ಯಾಸಕರ ನೇಮಕವಾಗದೇ ಸರಿಯಾಗಿ ಪಾಠಗಳೂ ನಡೆಯುತ್ತಿಲ್ಲ. ಹಾಗಾಗಿ ಅಗತ್ಯ ಉಪನ್ಯಾಸಕರನ್ನು ನೇಮಕಾತಿ ಸೇರಿದಂತೆ ಇನ್ನಿತರ ಬೇಡಿಕೆಗಳಾದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಪ್ರವೇಶ ನೀಡಬೇಕು, ಕಾಲೇಜಿನಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ತರಗತಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಗ್ರಂಥಾಲಯದಲ್ಲಿ ಓದಲು ದಿನ ಪತ್ರಿಕೆಗಳನ್ನು ಒದಗಿಸಬೇಕೆಂದು ವಿದ್ಯಾರ್ಥಿಗಳು ಒಕ್ಕೊರಲಿನಿಂದ ಆಗ್ರಹಿಸಿದರು.
ಪ್ರತಿಭಟನೆ ನಡೆಸಿ ಮೈಸೂರು ವಿವಿಯ ಕುಲಪತಿಗಳಾದ ಲೋಕನಾಥ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಅವರು ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರು ಸುಭಾಷ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಪದಾಧಿಕಾರಿಗಳಾದ ನಿತಿನ್ ,ಚಂದ್ರಿಕಾ, ಬೀರಪ್ಪ ,ಅಭಿ , ಹಾಗೂ ವಿದ್ಯಾರ್ಥಿಗಳಾದ ಪುನೀತ್, ರಕ್ಷಿತ, ಸಿದ್ದರಾಜು, ಸತೀಶ್, ರಹಿಲ್ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಡಿಯೋ ನೋಡಿ:ಕಟ್ಟಡ ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್‌ಗೆ ಕೊಕ್ಕೆ! ಭುಗಿಲೆದ್ದ ಕಾರ್ಮಿಕರ ಆಕ್ರೋಶ Janashakthi Media