ಅಧಿವೇಶನದಲ್ಲಿ ನೀಟ್ ಪರೀಕ್ಷಾ ಅಕ್ರಮ ಪ್ರಸ್ತಾಪ; ಸಭೆ ಬಹಿಷ್ಕರಿಸಿದ ಪ್ರತಿಪಕ್ಷಗಳು

ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಪ್ರಕರಣ ಲೋಕಸಭಾ ಅಧಿವೇಶನದ ಜಂಟಿ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ಈ ವಿಷಯವಾಗಿ  ಚರ್ಚೆಗೆ ಒಂದು ದಿನದ ಕಾಲವಕಾಶ ಕೋರಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪಟ್ಟು ಹಿಡಿದರು.

ಪ್ರತಿಪಕ್ಷಗಳು ಸೋಮವಾರ ಕಲಾಪ ಆರಂಭಗೊಳ್ಳುತ್ತಿದ್ದಂತೆ ನೀಟ್ ಪರೀಕ್ಷಾ ಅಕ್ರಮ ಚರ್ಚೆಗೆ ಕೋರಿ ಪಟ್ಟು ಹಿಡಿದಿವೆ. ಸ್ಪೀಕರ್ ಓಂಪ್ರಕಾಶ್ ಬಿರ್ಲಾ ಚರ್ಚೆಗೆ ಅವಕಾಶ ನೀಡಲು ನಿರಾಕರಿಸಿದ್ದರಿಂದ ಪ್ರತಿಪಕ್ಷಗಳು ಸಭೆಯನ್ನು ಬಹಿಷ್ಕರಿಸಿ ಹೊರನಡೆದವು.

ಇದನ್ನು ಓದಿ : ಇಂದಿನಿಂದ ದೇಶದಲ್ಲಿ ಹೊಸ ಕಾನೂನು ನಿಯಮ ಜಾರಿಗೆ

‘ನೀಟ್ ಅಕ್ರಮದ ಬಗ್ಗೆ ಒಂದು ದಿನ ಪ್ರತ್ಯೇಕ ಚರ್ಚೆಯನ್ನು ನಾವು ಬಯಸುತ್ತಿದ್ದೇವೆ. ಇದು ಅತ್ಯಂತ ಪ್ರಮುಖ ವಿಷಯ. 2 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. 70 ಕಡೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ. ಈ ಬಗ್ಗೆ ಪ್ರತ್ಯೇಕ ಚರ್ಚೆಗೆ ಅವಕಾಶ ನೀಡಿದರೆ ನಮಗೆ ಅತ್ಯಂತ ಸಂತಸವಾಗುತ್ತದೆ’ ಎಂದು ರಾಹುಲ್ ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಲೋಕಸಭೆ ಉಪನಾಯಕ ಸಿಂಗ್, ಸದನದಲ್ಲಿ ಚರ್ಚೆಗೆ ಕೆಲವು ನೀತಿ ನಿಯಮಗಳಿವೆ. ಅವುಗಳೇ ಸದನವನ್ನು ಗಟ್ಟಿಗೊಳಿಸಿವೆ ಎಂದು ಹೇಳಿದರು.‘ನನ್ನ ದಶಕಗಳ ಅನುಭವದಲ್ಲಿ ವಂದನಾ ನಿರ್ಣಯದ ಚರ್ಚೆ ವೇಳೆ ಬೇರೆ ಯಾವುದೇ ವಿಷಯವನ್ನು ಚರ್ಚೆಗೆ ತೆಗೆದುಕೊಂಡಿಲ್ಲ. ಈ ಚರ್ಚೆ ಮುಗಿದ ಬಳಿಕವೇ ಉಳಿದ ವಿಷಯಗಳ ಚರ್ಚೆ ನಡೆಯುತ್ತದೆ’ ಎಂದು ಹೇಳಿದರು.

ವಂದನಾ ನಿರ್ಣಯದ ಮೇಲಿನ ಚರ್ಚೆ ಬಳಿಕ ನೀಟ್ ಕುರಿತ ಚರ್ಚೆಗೆ ಅವಕಾಶ ನೀಡುವ ಬಗ್ಗೆ ಸ್ಪಷ್ಟ ಭರವಸೆ ನೀಡುವಂತೆ ರಾಹುಲ್ ಮತ್ತು ವಿಪಕ್ಷಗಳ ಸದಸ್ಯರು ಒತ್ತಾಯಿಸಿದರು.

ಮತ್ತೊಂದೆಡೆ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದು, ಪ್ರಧಾನಿಗಳು ಕೇವಲ ಘೋಷಣೆ ಕೂಗುವುದಕ್ಕಷ್ಟೇ ಸೀಮಿತವಾಗಿದ್ದಾರೆ. ದೇಶದ ಯುವಕರು ಸಂಕಷ್ಟ ಎದುರಿಸುತ್ತಿರುವಾಗ ಚರ್ಚೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನು ನೋಡಿ : ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೇಲಿರುವ ಗುರುತರ ಜವಬ್ದಾರಿಗಳೇನು? Janashakthi Media

Donate Janashakthi Media

Leave a Reply

Your email address will not be published. Required fields are marked *