ನೀಟ್-ಯುಜಿ ಸೋರಿಕೆ ಹಗರಣ:ಸಿಬಿಐನಿಂದ ಇಬ್ಬರ ಬಂಧನ

ನವದೆಹಲಿ: ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ತಲ್ಲಣ ಮೂಡಿಸಿ ಬಹುತೇಕರ ಭವಿಷ್ಯತ್ತಿಗೆ‌ ಮಾರಕವಾದ ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಬ್ಬರನ್ನು ಬಂಧಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಇದಯ ಮೊದಲ ಬಂಧನ ಮಾಡಿದ್ದು, ಬಿಹಾರದ ಪಾಟ್ನಾದಲ್ಲಿ ಇಬ್ಬರು ವ್ಯಕ್ತಿಗಳನ್ನು ಸಿಬಿಐ ಬಂಧಿಸಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್ ಎಂದು ಗುರುತಿಸಲಾಗಿದೆ.

ಇದನ್ನು ಓದಿ : ನೀಟ್ ಮತ್ತು ನೆಟ್ ಪರೀಕ್ಷೆಯಲ್ಲಿ ಕಳಪೆ ನಿರ್ವಹಣೆ; ಅವಿರೋಧ ನಿರ್ಣಯ ಆಂಗೀಕರಿಸಿದ ಕೇರಳ

ಮನೀಶ್ ಕುಮಾರ್ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಕನಿಷ್ಠ ಎರಡು ಡಜನ್ ವಿದ್ಯಾರ್ಥಿಗಳಿಗೆ ಕೊಠಡಿಯನ್ನು ಕಾಯ್ದಿರಿಸಿದ್ದಾನೆ ಎಂದು ಶಂಕಿಸಲಾಗಿದೆ. ಅಶುತೋಷ್ ತನ್ನ ನಿವಾಸದಲ್ಲಿ ವಿದ್ಯಾರ್ಥಿಗಳಿಗೆ ವಸತಿ ಒದಗಿಸಿದ್ದಾನೆ ಎನ್ನಲಾಗಿದೆ.

ಇದಕ್ಕೂ ಮುನ್ನ ಸಿಬಿಐ ಅಧಿಕಾರಿಗಳು ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿರುವ ಶಾಲೆಯ ಪ್ರಾಂಶುಪಾಲರನ್ನು ವಿಚಾರಣೆ ನಡೆಸಿದ್ದರು. ತನಿಖೆಯು ವೈದ್ಯಕೀಯ ಪ್ರವೇಶ ಪರೀಕ್ಷೆಯ ಸುತ್ತಲಿನ ಆರೋಪಗಳ ಮೇಲೆ ಕೇಂದ್ರೀಕರಿಸಿದೆ ಎಂದು ಮೂಲಗಳು ಹೇಳಿವೆ.

ಇದನ್ನು ನೋಡಿ : ನೀಟ್ “ಕಾಸಿದ್ದವರ ಮೆಡಿಕಲ್ “ಮೀಸಲಾತಿಯೆ? ನೀಟಾಗದ ಪರೀಕ್ಷೆಯ ಹೊಣೆ ಹೊರುವುದೆ ಕೇಂದ್ರ ಸರ್ಕಾರ? J#neet2024

Donate Janashakthi Media

Leave a Reply

Your email address will not be published. Required fields are marked *