ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಬೆಂಗಳೂರಿಗೆ ಆಗಮಿಸುವ ಹೊರಗಿನವರು ಕಡ್ಡಾಯವಾಗಿ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿಸಿರಬೇಕು ಮತ್ತು ಕೋವಿಡ್-19 ನೆಗೆಟಿವ್ ವರದಿಯಾಗಿರಬೇಕೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಏಪ್ರಿಲ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ. ಸದ್ಯ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ಮಾತ್ರ ಈ ನಿಯಮಗಳು ಪಾಲನೆಯಾಗಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಅನ್ವಯಿಸುವುದಿಲ್ಲ ಎಂದು ಹೇಳಿದರು.
ಇದನ್ನು ಓದಿ : ಕಳೆದ 24 ಗಂಟೆಗಳಲ್ಲಿ 35,871 ಹೊಸ ಕೊರೊನಾ ವೈರಸ್ ಪ್ರಕರಣ ಪತ್ತೆ
‘ಮುಂದಿನ ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುವ ಸಂಭವವಿದೆ. ಬೆಂಗಳೂರಿ ನಗರದಲ್ಲಿ ದಾಖಲಾಗುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಶೇ 60ರಷ್ಟು ಅಂತರ್ ರಾಜ್ಯ ಪ್ರಯಾಣಿಕರಾಗಿದ್ದಾರೆ. ಬೆಂಗಳೂರಿನ ಬಹುಮಹಡಿ ಕಟ್ಟಡಗಳಲ್ಲಿ ಅಥವಾ ಇತರೆ ಸ್ಥಳಗಳಲ್ಲಿ ವಾಸಿಸುವವರು ಹೊರ ರಾಜ್ಯಗಳಿಂದ ಬರುತ್ತಿದ್ದರೆ ಕಡ್ಡಾಯವಾಗಿ ಆರ್‌ಟಿ–ಪಿಸಿಆರ್ ಪರೀಕ್ಷೆ ಮಾಡಿಸಬೇಕು. ಯಾವುದೇ ರಾಜ್ಯದಿಂದ ಬಂದರೂ ಪರೀಕ್ಷೆ ಕಡ್ಡಾಯ. ಬಿಬಿಎಂಪಿ ಕಮಿಷನರ್ ಈ ಕುರಿತು ಶೀಘ್ರದಲ್ಲಿಯೇ ಆದೇಶ ಹೊರಡಿಸಲಿದ್ದಾರೆ’ ಎಂದು ಸುಧಾಕರ್ ತಿಳಿಸಿದರು.
- ಇಂದು ದಾಖಲಾದ ಕೋವಿಡ್-19ರ ಹೊಸ ಪ್ರಕರಣಗಳು : 2523
- ಕರ್ನಾಟಕ ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳು 978478
- ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ : 18207
- ಒಟ್ಟಾರೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 947781
- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬಿಡುಗಡೆಯಾದವರ ಸಂಖ್ಯೆ : 1192
- ರಾಜ್ಯದಲ್ಲಿ ಒಟ್ಟು ಮೃತ ಪಟ್ಟವರ ಸಂಖ್ಯೆ : 12471
- ಕಳೆದ 24 ಗಂಟೆಯಲ್ಲಿ ನಿಧನ : 10
- ಬೆಂಗಳೂರು ನಗರ ಜಿಲ್ಲೆಯ ಒಟ್ಟು ಕೋವಿಡ್ ಪ್ರಕರಣಗಳು : 422859
- ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ ದಾಖಲಾದ ಪ್ರಕರಣಗಳು : 1623
ಆರ್‌ಟಿ–ಪಿಸಿಆರ್ ನೆಗೆಟಿವ್ ವರದಿ ಇರುವುದು ಕಡ್ಡಾಯ, ಇಲ್ಲವಾದರೆ ಅವರಿಗೆ ಇಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದರು. ಪ್ರಸ್ತುತ ಮಹಾರಾಷ್ಟ್ರ, ಕೇರಳ, ಪಂಜಾಬ್ ಹಾಗೂ ಚಂಡೀಗಡದಿಂದ ಬರುವ ಪ್ರಯಾಣಿಕರಿಗೆ ಮಾತ್ರ ಆರ್‌ಟಿ–ಪಿಸಿಆರ್ ಪರೀಕ್ಷೆ ವರದಿ ಕಡ್ಡಾಯವಿತ್ತು.
ಇದನ್ನು ಓದಿ : ಕೋವಿಡ್ ಲಸಿಕೆ ಅಡ್ಡಪರಿಣಾಮ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ
ನೆನ್ನೆ ಬೆಂಗಳೂರಿನಲ್ಲಿ ನಾಲ್ಕು ತಿಂಗಳ ಗರಿಷ್ಠ, ಸುಮಾರು 1,400 ಪ್ರಕರಣಗಳು ದಾಖಲಾಗಿವೆ.
ಆರೋಗ್ಯ ಸಚಿವರಾದ ಡಾ. ಕೆ. ಸುಧಾಕರ್ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಇಂದು ಬಿಬಿಎಂಪಿ ವ್ಯಾಪ್ತಿಯ ಎಂಟು ಜಂಟಿ ಆಯುಕ್ತರೊಂದಿಗೆ ಚರ್ಚೆ ನಡೆಸಿದರು.
ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಕಚೇರಿಯಲ್ಲಿ ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು.
ಲಸಿಕೆ ವಿತರಣೆ, ಪರೀಕ್ಷೆ ಹೆಚ್ಚಳ, ಪರಿಣಾಮಕಾರಿ ಸಂಪರ್ಕ ಪತ್ತೆ, ಅಂಬ್ಯುಲೆನ್ಸ್, ಹಾಸಿಗೆ, ಐಸಿಯು, ವೆಂಟಿಲೇಟರ್ ಗಳ ಲಭ್ಯತೆ, ಮಾರ್ಷಲ್ ಗಳ ನಿಯೋಜನೆ ಸೇರಿದಂತೆ ಹಲವು ವಿಷಯಗಳನ್ನು ಪರಿಶೀಲಿಸಲಾಯಿತು. pic.twitter.com/JRtK71DQr0
— Dr Sudhakar K (@mla_sudhakar) March 25, 2021
ಇದನ್ನು ಓದಿ : ನಮ್ಮ ಬಡಿದಾಟಗಳಲ್ಲಿ ಹೆಂಡತಿ, ಮಕ್ಕಳನ್ನು ತರುವುದು ನಮ್ಮ ಕುಟುಂಬಗಳಿಗೆ ನಾವೇ ಮಾಡಿಕೊಂಡ ಅಪಮಾನ – ಶಾಸಕ ಸಾರಾ ಮಹೇಶ್
ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧರಿಸಿರುವುದನ್ನು ಖಚಿತ ಪಡಿಸಲು ಮಾರ್ಷಲ್‌ಗಳನ್ನು ನಿಯೋಜಿಸಲಾಗಿದೆ. ಅವರು ಬಸ್ ನಿಲ್ದಾಣಗಳು, ಮಾರುಕಟ್ಟೆಗಳು, ಚಿತ್ರ ಮಂದಿರಗಳು, ಮದುವೆ ಹಾಗೂ ಸಮಾರಂಭಗಳ ಸಭಾಂಗಣಗಳು, ಶಾಲೆಗಳು ಹಾಗೂ ಕಾಲೇಜು ಆವರಣಗಳಲ್ಲಿ ಇರುತ್ತಾರೆ.