ಬೆಂಗಳೂರು: ಪರೀಕ್ಷೆಗೆ ಒಳಪಟ್ಟ ಮಂದಿಗೆ ಕೋವಿಡ್ ರೋಗ ಲಕ್ಷಣವಿದ್ದು ಅವರಿಗೆ ನೆಗೆಟಿವ್ ವರದಿ ಕಂಡುಬಂದರೂ ಸಹ ಆರೋಗ್ಯ ರಕ್ಷಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಆದೇಶ ಹೊರಡಿಸದೆ. ಹಲವು ಪ್ರಕರಣಗಳಲ್ಲಿ ಆರ್‌ಟಿಪಿಸಿಆರ್ ಅಥವಾ ರ‍್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಿದರೂ ನೆಗೆಟಿವ್ ವರದಿ ಬರುವ ಸಂಭವವಿರುತ್ತದೆ. ಪರೀಕ್ಷೆಗೆ ಒಳಪಟ್ಟ ವ್ಯಕ್ತಿಗೆ ಕೋವಿಡ್ ರೋಗ ಲಕ್ಷಣವಿದ್ದರೂ ವರದಿಯಲ್ಲಿ ನೆಗೆಟಿವ್ ಬರುವುದಿದೆ. ಅಂತಹ ಸಂದರ್ಭದಲ್ಲಿ ರೋಗ ತೀವ್ರತೆ ಹೆಚ್ಚಾದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲು ಸಮಸ್ಯೆಯಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಡ್ರೋಮಿಕ್ ವಿಧಾನ ಅನುಸರಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದನ್ನು ಓದಿ: ಲಾಕ್‌ಡೌನ್ : ಸರಕಾರದಿಂದ ಅಗತ್ಯ ಕ್ರಮಗಳಿಲ್ಲ, ನಾಲ್ಕು ಘಂಟೆಯಲ್ಲಿ ವ್ಯಾಪಾರ ಮಾಡೋದು ಹೇಗೆ?
ಇದರ ಬಗ್ಗೆ ವೈದ್ಯರು ರೋಗಿ ಆರೋಗ್ಯ ಸ್ಥಿತಿಯನ್ನು ಗಮನಿಸಿ ಪ್ರಮಾಣೀಕರಿಸುತ್ತಾರೆ. ಅಂತಹ ರೋಗಿಗಳಿಗೆ ಪ್ರತ್ಯೇಕ ಸಂಖ್ಯೆಯನ್ನು ನೀಡಿ ಗುರುತಿಸಿ, ನಿರ್ದಿಷ್ಟ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಾಸುವಂತೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಅಂತಹವರನ್ನು ಕೊರೊನಾ ರೋಗಿ ಎಂದೇ ಪರಿಗಣಿಸಲಾಗುತ್ತದೆ. ರೋಗಿಗೆ ಸೂಕ್ತ ಸಮಯದಲ್ಲಿ ಅಗತ್ಯವಾದ ಅಗತ್ಯ ಚಿಕಿತ್ಸೆ ಬೇಕಾಗುತ್ತದೆ. ಹಾಗಾಗಿ ಹೊಸದಾಗಿ ಈ ವಿಧಾನವನ್ನು ಅನುರಿಸಲು ನಿರ್ಧರಿಸಲಾಗಿದೆ. ಈ ಕುರಿತು ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.