ಹುಬ್ಬಳ್ಳಿಯ ಬಿವಿಬಿ ಕಾಲೇಜ್ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಎಸ್ಎಫ್ಐ ಆಗ್ರಹ.

ಕಲಬುರ್ಗಿ : ಹುಬ್ಬಳ್ಳಿಯ BVB ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾಳ ಭೀಕರ ಕೊಲೆ, ಹತ್ಯೆಯನ್ನು ಖಂಡಿಸಿ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆಯನ್ನು ವಿಧಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಕಾರ್ಯಕರ್ತೆಯರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.

ಎಸ್ಎಫ್ಐ ವಿದ್ಯಾರ್ಥಿನಿಯರ ರಾಜ್ಯ ಸಂಚಾಲಕಿ ಸುಜಾತಾ ಮಾತನಾಡಿ, ಮಹಿಳೆಯರ ಮೇಲೆ ದೌರ್ಜನ್ಯ, ಶೋಷಣೆ, ಕೊಲೆಗಳು ದಿನೇ ದಿನೇ ಹೆಚ್ಚುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ,ರಕ್ಷಣೆ ಇಲ್ಲದೆ ಇರುವುದು ಈ ಘಟನೆಗಳಿಗೆ ಕಾರಣವಾಗಿವೆ. ಹುಬ್ಬಳ್ಳಿ ವಿದ್ಯಾನಗರದ ಕೆಎಲ್ಇಯ ಅಡ್ಡಿಯಲ್ಲಿ ಬರುವ ಕರ್ನಾಟಕ ಲಿಂಗಾಯತ ಶಿಕ್ಷಣ ತಾಂತ್ರಿಕ ವಿಶ್ವವಿದ್ಯಾನಿಲಯ (ಬಿವಿಬಿ) ಆವರಣದಲ್ಲಿ ಗುರುವಾರ ರಂದು ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬ ವಿದ್ಯಾರ್ಥಿನಿಯನ್ನು ಹಡಹಾಗಲೆ ತನ್ನ ಹಳೆಯ ಸಹಪಾಠಿ ಚಾಕುವಿನಿಂದ ಕೊಲೆಮಾಡಿ ಹತ್ಯೆಗೈದಿರುವುದು ಅತ್ಯಂತ ಖಂಡನೀಯ. ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದರು.

ಇಂತಹ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನವೂ ನಡೆಯುತ್ತಿದ್ದು ಸರ್ಕಾರ ಇವುಗಳ ಬಗ್ಗೆ ಗಮನ ನೀಡದೆ ಇರುವುದು ಈ ರೀತಿಯ ಘಟನೆಗಳು ಹೆಚ್ಚಾಗಿವೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಆದರೆ ಇದನ್ನು ರಾಜ್ಯ ಸರ್ಕಾರ ಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು. ಇಂತಹ ಆರೋಪಿಗಳಿಗೆ ಕಾನೂನು ಕಠಿಣ ಶಿಕ್ಷೆ ವಿಧಿಸಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ವಿದ್ಯಾರ್ಥಿನಿಯರ, ಮಹಿಳೆಯರ ರಕ್ಷಣೆ ಹಾಗೂ ಭದ್ರತೆಗಾಗಿ ಮಹಿಳಾ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ಒಂದು ವೇಳೆ ತಪ್ಪಿತಸ್ಥ ಆರೋಪಿಗೆ ಕಠಿಣ ಶಿಕ್ಷೆ ವಿಧಿಸದಿದ್ದರೆ ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳನ್ನು ಬಿದಿಗಿಳಿಸಿ ಉಗ್ರ ಹೋರಾಟ ಮಾಡಲಾಗುವುದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಮುಖಂಡರಾದ ಕಾವೇರಿ, ಸುಷ್ಮಾ, ಹುಲುಗಮ್ಮ , ನಾಗಮ್ಮ, ಮಾಲಾಶ್ರೀ, ಶಾಂಭವಿ , ದ್ರೌಪತಿ ,ಲಕ್ಷ್ಮೀ ಸೇರಿದಂತೆ ಇತರರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *