ಹುಬ್ಬಳ್ಳಿ : ಬರ್ಬರವಾಗಿ ಹತ್ಯೆಯಾದ ಕಾಲೇಜು ವಿದ್ಯಾರ್ಥಿ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಇಂದು ಭೇಟಿ ನೀಡಿದರು. ನೇಹಾ ತಂದೆ-ತಾಯಿಯಾದ ನಿರಂಜನ ಹಿರೇಮಠ ಹಾಗೂ ಗೀತಾ ಅವರಿಗೆ ಸಿಎಂ ಸಾಂತ್ವನ ಹೇಳಿದರು.
ಮಗಳ ಅಗಲಿಕೆಯ ದುಃಖದಲ್ಲಿದ್ದ ನಿರಂಜನ ಹಿರೇಮಠ ಕೈ ಹಿಡಿದು ಸಿದ್ದರಾಮಯ್ಯ ಸಂತೈಸಿದರು. ಈ ವೇಳೆ ಸಚಿವರಾದ ಸಂತೋಷ್ ಲಾಡ್, ಹೆಚ್.ಕೆ.ಪಾಟೀಲ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್. ಕೋನರೆಡ್ಡಿ ಸಿಎಂ ಜೊತೆ ಇದ್ದರು.
ನಮ್ಮ ಮಗಳ ಸಾವಿಗೆ ನ್ಯಾಯ ಸಿಗಬೇಕು. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಇದೇ ವೇಳೆ ನೇಹಾ ತಂದೆ-ತಾಯಿ, ಸಿಎಂ ಬಳಿ ಕೈಮುಗಿದು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲಾಗಿದೆ. ಖಂಡಿತವಾಗಿಯೂ ಆರೋಪಿಗೆ ತಕ್ಕ ಶಿಕ್ಷೆಯಾಗುತ್ತದೆ ಎಂದು ಭರವಸೆ ನೀಡಿದರು. ಇದು ಅಮಾನವೀಯ ಕೃತ್ಯ. ಇದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ ಎಂದರು.