ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮರುನಾಮಕರಣಕ್ಕೆ ರಾಷ್ಟ್ರಪತಿ ಮುರ್ಮು ಒಪ್ಪಿಗೆ

ನೆಹರು ಸ್ಮಾರಕ ಮ್ಯೂಸಿಯಂ ಇನ್ನು ಪ್ರಧಾನ ಮಂತ್ರಿ ಮ್ಯೂಸಿಯಂ ನೆಹರು ಸ್ಮಾರಕ

ನವದೆಹಲಿ: ದೆಹಲಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರು ಸ್ಮಾರಕ ಮ್ಯೂಸಿಯಂ ಎಂದು ಹೆಸರಾದ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಶುಕ್ರವಾರ ಸೆಪ್ಟೆಂಬರ್‌-1 ರಂದು ವರದಿಯಾಗಿದೆ.

ಇದನ್ನೂ ಓದಿ:ಜಮ್ಮು ಕಾಶ್ಮೀರದ ರಾಜ್ಯ ಸ್ಥಾನಮಾನ ಯಾವಾಗ ಮರುಸ್ಥಾಪಿಸುತ್ತೀರಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ

ಈ ಕುರಿತು ರಾಷ್ಟ್ರಪತಿ ಭವನ ಗೆಜೆಟ್‌ ಅಧಿಸೂಚನೆಯನ್ನು ಹೊರಡಿಸಿದೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ದೆಹಲಿಯ ತೀನ್‌ ಮೂರ್ತಿ ಭವನ ಆವರಣದಲ್ಲಿರುವ ನೆಹರು ಸ್ಮಾರಕ ಮ್ಯೂಸಿಯಂ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದ್ದು ಈಗ ಅದು  ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ ಎಂಬುವುದಾಗಿ ಅಧಿಕೃತವಾಗಿ ಮರುನಾಮಕರಣಗೊಂಡಿದೆ.  ನೆಹರು ಸ್ಮಾರಕ

ಅಕ್ಟೋಬರ್‌-14 ರಿಂದ ಅಧಿಕೃತವಾಗಿ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯು ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯಾಗಿ ಬದಲಾಗಿದೆ. ಪ್ರಜಾಪ್ರಭುತ್ವಿಕರಣ ಮತ್ತು ವೈವಿಧೀಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಪಿಎಂಎಂಎಲ್‌ ಉಪಾಧ್ಯಕ್ಷ ಎ.ಸೂರ್ಯ ಪ್ರಕಾಶ್‌ ತಿಳಿಸಿದ್ದರು. ನೆಹರು ಸ್ಮಾರಕ

ಎನ್‌ಎಂಎಂಎಲ್‌ನ ಉಪಾಧ್ಯಕ್ಷರೂ ಆಗಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅಧ್ಯಕ್ಷತೆಯಲ್ಲಿ ಜೂನ್‌-17 ರಂದು ನಡೆದ ವಿಶೇಷ ಸಭೆಯಲ್ಲಿ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.

ಬ್ರಿಟಿಷರ ಆಳ್ವಿಕೆ ವೇಳೆ ನಿರ್ಮಿಸಲಾಗಿರುವ ತೀನ್‌ ಮೂರ್ತಿ ಭವನ, ದೇಶ ಸ್ವಾತಂತ್ರ್ಯ ಪಡೆದ ನಂತರ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರು ಅವರ ಅಧಿಕೃ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ 16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964 ರಲ್ಲಿ ಈ ಭವನದಲ್ಲಿ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಿ, ಸಮರ್ಪಿಸಲಾಯಿತು. ನಂತರ ಇದಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲಾಯಿತು. ಇದರ ಅಂಗವಾಗಿ 1966ರ ಏಪ್ರಿಲ್-1‌ ರಂದು ನೆಹರೂ ಸ್ಮಾರಕ ಮ್ಯೂಸಿಯಂ ಅಥವಾ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ಸ್ಥಾಪಿಸಲಾಯಿತು.

ನೆಹರು ಸ್ಮಾರಕ

ನೆ

Donate Janashakthi Media

Leave a Reply

Your email address will not be published. Required fields are marked *