ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ಸಂದರ್ಭದಲ್ಲಿ ಆಳುವ ಸರಕಾರವು ಜನಸಾಮಾನ್ಯರ ಸಂಕಟಗಳಿಗೆ ಧ್ವನಿಯಾಗಿ ಸಮರ್ಪಕವಾಗಿ ಕೆಲಸ ಮಾಡಿ ಎಂದು ಕರ್ನಾಟಕ ಹೈಕೋರ್ಟ್ ಹೇಳಿಕೆ ವಿರುದ್ಧ ಉದ್ಧಟನದಿಂದ ಮಾತನಾಡಿದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹಾಗೂ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಸೇರಿದಂತೆ ಹಲವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನು ಓದಿ: ಕೊರೊನಾ ಲಸಿಕೆಗೆ ರಾಜ್ಯ ಕಾಂಗ್ರೆಸ್ ನಿಂದ 100 ಕೋಟಿ ಹಣ ನೀಡಲು ನಿರ್ಧಾರ
ʻಡಿ ವಿ ಸದಾನಂದಗೌಡ ಅವರು ಲಸಿಕೆ ಸಿಗದಿದ್ದರೆ ನಾವು ನೇಣು ಹಾಕಿಕೊಳ್ಳಬೇಕಾ?ʼ ಎಂದು ಹೈಕೋರ್ಟ್ ಹೇಳಿಕೆ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಚಿವ ಸದಾನಂದಗೌಡ ಅವರೇ, ನೇಣು ಹಾಕಿಕೊಳ್ಳುವುದು ಮಹಾಪಾಪ ಮಾತ್ರವಲ್ಲ, ಕಾನೂನಿಗೆ ವಿರುದ್ಧವಾದುದ್ದು ಕೂಡ. ಅದನ್ನೆಲ್ಲ ಮಾಡಲು ಹೋಗಬೇಡಿ. ಆಡಳಿತ ನಡೆಸುವುದು ನಿಮಗಾಗದಿದ್ದರೆ ಮರ್ಯಾದೆಯಿಂದ ರಾಜೀನಾಮೆ ಕೊಟ್ಟು ಹೊರಡಿ. ದೇಶಕ್ಕಾಗಿ ಅಷ್ಟು ಮಾಡಿ ಪುಣ್ಯ ಕಟ್ಕೊಳ್ಳಿ ಎಂದು ಪ್ರತಿಕ್ರಿಯಿಸಿದ್ದಾರೆ.
ಇದನ್ನು ಓದಿ: ಕೋವಿಡ್ ಪರಿಹಾರ : ಬಾಯಿ ಮುಚ್ಚಿದ ಸಿಎಂ! – ಹಳ್ಳ ಹಿಡಿಯಿತೇ ಪಿಎಂ ಆತ್ಮನಿರ್ಭರ್!!
ʻಸಿ ಟಿ ರವಿ ಅವರು ನ್ಯಾಯಾಧೀಶರೇನು ಸರ್ವಜ್ಞರೇ ಎಂದು ಹೈಕೋರ್ಟ್ ಆದೇಶದ ವಿರುದ್ಧ ಪ್ರತಿಕ್ರಿಯಿಸಿದ್ದರು. ಉದಕ್ಕೆ ಉತ್ತರವಾಗಿ ಸಿದ್ದರಾಮಯ್ಯ ಅವರು ರವಿ ಅವರೇ ಜನರ ಸಂಕಟಕ್ಕೆ ದನಿಯಾಗಲು ಸರ್ವಜ್ಞನಾಗಬೇಕಿಲ್ಲ. ಮಾನವೀಯತೆಯುಳ್ಳ ಮನುಷ್ಯನಾಗಿದ್ದರೆ ಸಾಕು. ಅಧಿಕಾರದ ದುರಹಂಕಾರ ಬಿಟ್ಟು ಮೊದಲು ಮನುಷ್ಯರಾಗಿ. ನ್ಯಾಯಾಧೀಶರ ನಿಂದನೆ ನ್ಯಾಯಾಲಯದ ನಿಂದನೆ ಕೂಡಾ ಆಗುತ್ತದೆ ಎಂಬ ಅರಿವು ನಿಮಗಿಲ್ಲವೇ ಇದೂ ಗೊತ್ತಿಲ್ಲದೆ ಇದ್ದರೆ ನಿಮ್ಮನ್ನು ಸರ್ವಜ್ಞ ಎನ್ನುವುದಿಲ್ಲ, ಮೂರ್ಖ ಎನ್ನುತ್ತಾರೆ. ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.