ಬೆಂಗಳೂರು: ಸಮುದಾಯ ಕರ್ನಾಟಕ ಸಂಘಟನೆ ವತಿಯಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಏನಾಗಬೇಕು, ಏನಿದೆ ಮತ್ತು ಮುಂದೇನು ಎಂಬ ವಿಷಯವನ್ನು ಕುರಿತಂತೆ ಆಯೋಜಿಸಲಾಗಿದ್ದ ಒಂದು ದಿನದ ಕಾರ್ಯಾಗಾರವನ್ನು ಡಾ. ಬಂಜೆಗೆರೆ ಜಯಪ್ರಕಾಶ್ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನ ಜೈ ಭೀಮ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ “ಪ್ರಭುತ್ವ ಮತ್ತು ಶಿಕ್ಷಣದ ಹಕ್ಕು” ಎಂಬ ವಿಷಯದ ಕುರಿತು ಹೈಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸವಿಸ್ತಾರವಾಗಿ ಮಂಡಿಸಿದರು.
ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್, ವರಲಕ್ಷ್ಮೀ ಪೂರ್ವ ಪ್ರಾಥಮಿಕ ಶಿಕ್ಷಣ, ಆರ್.ರಾಮಕೃಷ್ಣ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದ ಬಗ್ಗೆ ಹಾಗೂ ಶಿಕ್ಷಣ ತಜ್ಞ ಶ್ರೀಪಾದ್ ಭಟ್ ಹಾಗೂ ವಿಷಯವನ್ನು ಮಂಡಿಸಿದರು.
ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಾವಳ್ಳಿ ಶಂಕರ್ ವಹಿಸಿದ್ದರು. ಕಾರ್ಯಾಗಾರದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ(ಬಿಜಿವಿಎಸ್), ದಲಿತ ಹಕ್ಕುಗಳ ಸಮಿತಿ-ಕರ್ನಾಟಕ, ವಿದ್ಯಾರ್ಥಿ ಮತ್ತು ಮಹಿಳಾ ಸಂಘಟನೆಗಳ ಕಾರ್ಯಕರ್ತರು ಸೇರಿ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.