ಅಕ್ಟೋಬರ್ 1ರಿಂದ  ಶೈಕ್ಷಣಿಕ ವರ್ಷಾರಂಭ: ಯುಜಿಸಿ

ನವದೆಹಲಿ: ದೇಶಾದ್ಯಂತ ವಿಶ್ವವಿದ್ಯಾನಿಲಯಗಳು ಹಾಗೂ ಕಾಲೇಜುಗಳನ್ನು ಅಕ್ಟೋಬರ್ 1 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭ ಮಾಡಬೇಕೆಂದು ವಿಶ್ವವಿದ್ಯಾನಿಲಯ ಧನ ಸಹಾಯ ಆಯೋಗದ (ಯುಜಿಸಿ) ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಮಾರ್ಗಸೂಚಿಯ ವಿವರಗಳನ್ನು ಪ್ರಕಟಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಸ್ಥಿತಿಯಿಂದಾಗಿ 2021ರ ಸೆಪ್ಟೆಂಬರ್ 30ರೊಳಗೆ ದಾಖಲಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು. ಅಕ್ಟೋಬರ್ 1 ರಿಂದ ಜುಲೈ 31 ರವರೆಗೆ 2021-2022ನೇ ಸಾಲಿನ ಶೈಕ್ಷಣಿಕ ವರ್ಷದ ದಿನಾಂಕವನ್ನು ಪ್ರಕಟಿಸಲಾಗಿದೆ.

ಇದನ್ನು ಓದಿ: ದೈಹಿಕ ತರಗತಿ ಆರಂಭದ ಸಿದ್ಧತೆಗಳಿಗೆ ಉಪನ್ಯಾಸಕರು ಕೆಲಸಕ್ಕೆ ಮರಳುವಂತೆ ಸೂಚನೆ

ಇದೇ ಸಂದರ್ಭದಲ್ಲಿ ಶೈಕ್ಷಣಿಕ ವರ್ಷದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸುವ ಅಗತ್ಯ ನಡವಳಿಗಳು ಮತ್ತು ಸಲಹೆಗಳನ್ನು ಪಾಲಿಸುವಂತೆಯೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಬೋಧನೆ ಮತ್ತು ಕಲಿಕೆಯ ಪ್ರಕ್ರಿಯೆಗಳನ್ನು ಆಫ್‌ಲೈನ್, ಆನ್‌ಲೈನ್ ಅಥವಾ ಸಂಯೋಜಿತ ಕ್ರಮಗಳಲ್ಲಿ ಮಾಡುವ ಬಗ್ಗೆ ಸಿದ್ಧತೆಗಳಿಗೆ ತಯಾರಾಗಬೇಕೆಂದು ಆಯೋಗ ಸ್ಪಷ್ಟಪಡಿಸಿದೆ. ತರಗತಿಗಳು, ವಿರಾಮಗಳು, ಪರೀಕ್ಷೆಗಳ ನಡವಳಿಕೆ, ಸೆಮಿಸ್ಟರ್ ವಿರಾಮ ಇತ್ಯಾದಿಗಳಿಗೆ ಸಂಸ್ಥೆಗಳು ಯೋಜನೆ ರೂಪಿಸಬಹುದಾಗಿದೆ.

ಕೇಂದ್ರೀಯ ಪೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ), ಐಸಿಎಸ್‌ಇ ಮತ್ತು ರಾಜ್ಯ ಶಿಕ್ಷಣ ಮಂಡಳಿಗಳು ಪರೀಕ್ಷಾ ಫಲಿತಾಂಶ ಪ್ರಕಟ ಪಡಿಸಿದ ನಂತರವೇ ಪದವಿ ಕೋರ್ಸ್‌ಗಳಿಗೆ ಪ್ರವೇಶಗಳನ್ನು ಪ್ರಾರಂಭಿಸುವಂತೆ ಸೂಚಿಸಲಾಗಿದೆ.

ಇದನ್ನು ಓದಿ: ನಾಲ್ಕು ವರ್ಷಗಳ ಪದವಿ ಶಿಕ್ಷಣ: ಬೆಂಕಿಯಿಂದ ಬಾಣಲೆಗೆ

ಎಲ್ಲಾ ಕಾಲೇಜು ಮಂಡಳಿಗಳು ಜುಲೈ 31ರ ಒಳಗೆ 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕಿದೆ. ಆನಂತರ ವಿದ್ಯಾರ್ಥಿಗಳ ದಾಖಲಾತಿ ಆರಂಭಿಸಬೇಕು. ಅಕಸ್ಮಾತ್ ಪರೀಕ್ಷೆ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾದರೆ ಅಕ್ಟೋಬರ್ 18ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭಿಸಬಹುದಾಗಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಸಾಂಕ್ರಾಮಿಕ ಸಮಯದಲ್ಲಿ ಪೋಷಕರು ಎದುರಿಸುತ್ತಿರುವ ಆರ್ಥಿಕ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಪ್ರವೇಶ ರದ್ದತಿ ಅಥವಾ ವಲಸೆಯ ಪ್ರಕರಣಗಳಲ್ಲಿ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ವಿಶ್ವವಿದ್ಯಾನಿಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *