ಫೆ.19ರಂದು ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ, ಫೆ.20ರಂದು ಪ್ರಮಾಣ ವಚನ

ನವದೆಹಲಿ: ಫೆಬ್ರವರಿ 19ರಂದು ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಫೆಬ್ರವರಿ 20 ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಬಿಜೆಪಿ

ದೆಹಲಿಯ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಆಯ್ಕೆಯಾದ ಶಾಸಕರು ಇಂದು ಸಭೆ ಸೇರಬೇಕಿತ್ತು. ಆದರೆ, ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಇದನ್ನು ಓದಿ :- ನವದೆಹಲಿ| ಎಎಪಿ ಮುಖಂಡ ಅನೋಖ್ ಮಿತ್ತಲ್ ಪತ್ನಿ ಕೊಲೆ

ನಾಳೆ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ.ಈ ಸಭೆ ಫೆಬ್ರವರಿ 19 ರಂದು ನಡೆಯಲಿದೆ. ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಫೆಬ್ರವರಿ 18 ರ ಬದಲು ಫೆಬ್ರವರಿ 20 ರಂದು ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕಾರ್ಯಕ್ರಮ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ತರುಣ್ ಚುಗ್ ಅವರನ್ನು ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಎನ್‌ಡಿಎ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಕಾರ್ಪೊರೇಟ್ ಜಗತ್ತಿನ ಕೈಗಾರಿಕೋದ್ಯಮಿಗಳು, ಚಲನಚಿತ್ರ ತಾರೆಯರು, ಕ್ರಿಕೆಟ್ ಆಟಗಾರರು, ಸಂತರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಫೆಬ್ರವರಿ 5 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಈ ಮೂಲಕ ಆಮ್ ಆದ್ಮಿ ಪಕ್ಷದ 10 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತು. ರಾಜಧಾನಿಯ 70 ವಿಧಾನಸಭಾ ಸ್ಥಾನಗಳಲ್ಲಿ ಕೇಸರಿ ಪಕ್ಷ 48 ಸ್ಥಾನಗಳನ್ನು ಗೆದ್ದಿತು. ಮುಖ್ಯಮಂತ್ರಿ ಮತ್ತು ಸಚಿವರ ಹುದ್ದೆಗಳಿಗೆ ಹೊಸದಾಗಿ ಆಯ್ಕೆಯಾದ ಹಲವಾರು ಶಾಸಕರ ಹೆಸರುಗಳು ಕೇಳಿಬರುತ್ತಿವೆ.

ಎಎಪಿ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ ಪರ್ವೇಶ್ ವರ್ಮಾ ಮತ್ತು ದೆಹಲಿ ಬಿಜೆಪಿಯ ಮಾಜಿ ಅಧ್ಯಕ್ಷರಾದ ವಿಜೇಂದರ್ ಗುಪ್ತಾ ಮತ್ತು ಸತೀಶ್ ಉಪಾಧ್ಯಾಯ ಅವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಕೇಳಿಬರುತ್ತಿದೆ. ಪವನ್ ಶರ್ಮಾ, ಆಶಿಶ್ ಸೂದ್, ರೇಖಾ ಗುಪ್ತಾ ಮತ್ತು ಶಿಖಾ ರೈ ಮುಂತಾದವರು ಮುಖ್ಯಮಂತ್ರಿ ಹುದ್ದೆಗೆ ಆಕಾಂಕ್ಷಿಗಳಾಗಿದ್ದಾರೆ

Donate Janashakthi Media

Leave a Reply

Your email address will not be published. Required fields are marked *