ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್ ಮೂಲಕ ಸಂದೇಶ ನೀಡಿರುವ ಮೋದಿ, ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರವಾಣ ವಚನ ಸ್ವೀಕರಿಸಿದ್ದಕ್ಕೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಇದನ್ನು ಓದಿ: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ
ಅವರು ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ಸರ್ಕಾರದ ಕೆಲಸ, ಯೋಜನೆಗಳನ್ನು ಜನತೆಗೆ ಸರಿಯಾಗಿ ಮುಟ್ಟಿಸುವಲ್ಲಿ ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ. ಕರ್ನಾಟಕದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತಾರೆ. ಅವರ ಫಲಪ್ರದ ಅಧಿಕಾರಾವಧಿಗೆ ಶುಭಾಶಯಗಳು ಎಂದು ಸಂದೇಶದಲ್ಲಿ ಹೇಳಿದ್ದಾರೆ.
ಯಡಿಯೂರಪ್ಪರನ್ನು ಹೊಗಳಿ ಟ್ವೀಟ್
ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ಮೋದಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಬಗ್ಗೆ ʻಕರ್ನಾಟಕದ ಅಭಿವೃದ್ಧಿಗೆ ಹಾಗೂ ಪಕ್ಷದ ಅಭಿವೃದ್ಧಿಗೆ ಯಡಿಯೂರಪ್ಪ ಸಲ್ಲಿಸಿರುವ ಸೇವೆಯು ಪದಗಳಿಂದ ಹೇಳಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ದಶಕಗಳ ಕಾಲ ಅವರು ಅವಿರತವಾಗಿ ದುಡಿದು, ರಾಜ್ಯದ ಉದ್ದಗಲಕ್ಕೂ ಸಂಚರಿಸಿ ಎಲ್ಲರ ಮೆಚ್ಚುಗೆ ಪಡೆಸಿದ್ದಾರೆʼ ಎಂದು ಹೊಗಳಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಗೆ ಯಡಿಯೂರಪ್ಪನವರ ಬದ್ಧತೆ ಶ್ಲಾಘನೀಯ ಎಂದು ಪ್ರಧಾನಿ ಹೊಗಳಿದ್ದಾರೆ.