ನವದೆಹಲಿ: ಸುಪ್ರೀಂ ಕೋರ್ಟ್ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ಸ್ಥಾಪಿಸಲಾಗಿರುವ ನ್ಯಾಯದೇವತೆಯ ಪ್ರತಿಮೆಯ ಹೊಸ ರೂಪ ನೀಡಲಾಗಿದೆ. ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ.
ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದ್ದು, ಖಡ್ಗ ಹಿಡಿದಿರುವ ಕೈಯಲ್ಲಿ ಸಂವಿಧಾನ ಪ್ರತಿಯಿದೆ. ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ ಎಂದು ಆಲ್ ಇಂಡಿಯಾ ರೇಡಿಯೊ ವರದಿಮಾಡಿದೆ.
ಇದನ್ನು ಓದಿ : ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಜಾರಿ ಬಿದ್ದ ಮಗು: ಮಗಳನ್ನು ರಕ್ಷಿಸಲು ರೈಲು ನಿಲ್ಲಿಸಿ 16 ಕಿಲೋಮೀಟರ್ ಓಡಿಹೋದ ತಂದೆ
ವಸಾಹತುಶಾಹಿ ಪರಂಪರೆಯನ್ನು ಕೈಬಿಟ್ಟು ಭಾರತ ಮುಂದುವರಿಯಬೇಕಾಗಿದೆ. ನ್ಯಾಯದೇವತೆ ಕುರುಡಲ್ಲ, ಅವಳು ಎಲ್ಲರನ್ನು ಸಮಾನವಾಗಿ ನೋಡುತ್ತಾಳೆ ಎಂಬ ಸಂದೇಶವನ್ನು ರವಾನಿಸಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಈ ಬದಲಾವಣೆಗೆ ಸೂಚಿಸಿದ್ದರು ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
ಇದನ್ನು ನೋಡಿ : 182 ಕೋಮು ದ್ವೇಷದ ಪ್ರಕರಣಗಳನ್ನು ಹಿಂಪಡೆದಿದ್ದ ಬಿಜೆಪಿ ಸರಕಾರ: ಸಚಿವ ರಾಮಲಿಂಗಾರೆಡ್ಡಿ Janashakthi Media