ಮೇ 4ರವರೆಗೆ ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್‌

ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರಂತೆ ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡುವಂತೆ ತಿಳಿಸಿದೆ.

  • ಮೊಬೈಲ್ ಶಾಪ್, ಟಿವಿ, ಎಲೆಕ್ಟ್ರಾನಿಕ್ ಶೋ ರೂಮ್, ಬ್ಯಾಂಗಲ್ಸ್ ಸ್ಟೋರ್, ಚಿನ್ನದ ಅಂಗಡಿ ಬುಕ್ ಶಾಪ್, ಚಪ್ಪಲಿ ಅಂಗಡಿಗಳು, ಫ್ಯಾನ್ಸಿ ಸ್ಟೋರ್, ಬಟ್ಟೆ ಅಂಗಡಿಗಳು ಸೇರಿ ಎಲ್ಲವನ್ನೂ ಬಂದ್ ಮಾಡಬೇಕಿದೆ.
  • ಹೋಟೆಲ್ , ರೆಸ್ಟೋರೆಂಟ್, ಬಾರ್ ಗಳಲ್ಲಿ ಪಾರ್ಸಲ್ ತರಲಷ್ತೇ ಅವಕಾಶವಿದೆ.  ಆಟೋ, ಬಸ್, ಮೆಟ್ರೋ ಸೇವೆಗಳು ಲಭ್ಯವಾಗಲಿದೆ.
  • ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಕಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ.

ಶನಿವಾರ ಮತ್ತು ಭಾನುವಾರ ದಿನಸಿ, ತರಕಾರಿ ಹಾಲು ಅಂಗಡಿಗಳು ಬೆಳಗ್ಗೆ 6ರಿಂದ 10ರವರೆಗೆ ಮಾತ್ರ ತೆರೆದಿರುತ್ತದೆ.

ಬ್ಯಾಂಕ್, ಎಟಿಎಂ, ಇನ್ಶ್ಯೂರೆನ್ಸ್ ಕಂಪನಿ, ಪೇಪರ್, ಟಿವಿ ಸೇರಿದಂತೆ ವಿವಿಧ ಮೀಡಿಯಾ ಸಂಸ್ಥೆಗಳು, ಇ-ಕಾಮರ್ಸ್ ಸೇವೆ, ಖಾಸಗಿ ಸೆಕ್ಯೂರಿಟಿ, ಕಟಿಂಗ್ ಶಾಪ್, ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿಸಲಾಗಿದೆ. ಮೆಟ್ರೋ, ಬಸ್, ಕ್ಯಾಬ್, ಅಟೋ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಆಸನ ಸಾಮರ್ಥ್ಯದ 50%ದಷ್ಟು ಮಾತ್ರ ಅವಕಾಶ ನೀಡಲಾಗಿದೆ.

ವಾರಾಂತ್ಯದ ಬಂದ್‌ ಲಾಕ್‌ಡೌನ್‌ ಮಾದರಿಯಲ್ಲೇ ಕಟ್ಟುನಿಟ್ಟಾಗಿರಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಪೊಲೀಸ್‌ ಆಯುಕ್ತ ಮತ್ತು ಡಿಸಿಪಿಗಳ ಜತೆ ನಡೆದ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಪ್ರವೇಶದ ರಸ್ತೆಗಳು, ಫ್ಲೈಓವರ್‌, ಪ್ರಮುಖ ರಸ್ತೆಗಳನ್ನು ಬಂದ್‌ ಮಾಡಲಾಗುವುದು ಎಂದರು.

ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈಗಾಗಲೇ ರಾತ್ರಿ ಕರ್ಫ್ಯೂವಿಗೆ ಸಾರ್ವಜನಿಕರು ಸಹಕಾರ ನೀಡಿದ್ದಾರೆ. ಅದೇ ರೀತಿ ವಾರಾಂತ್ಯದ ಕರ್ಫ್ಯೂವಿಗೆ ಸಹಕಾರ ನೀಡಬೇಕು ಎಂದರು.

Donate Janashakthi Media

One thought on “ಮೇ 4ರವರೆಗೆ ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್‌

Leave a Reply

Your email address will not be published. Required fields are marked *