ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೆರ್ಪಡೆ: ಹಕ್ಕು, ಆಕ್ಷೇಪಣೆ ಸಲ್ಲಿಸಲು ನ.28 ರ ವರೆಗೆ ಅವಕಾಶ

ಬೆಂಗಳೂರು : ರಾಜ್ಯದ ಎಲ್ಲಾ ವಿಧಾನಸಭಾ ಮತಕ್ಷೇತ್ರಗಳ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ಚುನಾವಣಾ ಅಧಿಕಾರಿಗಳು ಮತದಾರರ ಕರಡು ಯಾದಿಯನ್ನು ಪ್ರಕಟಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ದಿ: 01-01-2025 ರನ್ನು ಅರ್ಹ ದಿನಾಂಕವೆಂದು ಪರಿಗಣಿಸಿ ವಿಧಾನಸಭಾ ಕ್ಷೇತ್ರಗಳ ಮತದಾರರ ಯಾದಿಗಳನ್ನು ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಚುನಾವಣಾ ಆಯೋಗವು ವೇಳಾ ಪಟ್ಟಿಯನ್ನು ಹೊರಡಿಸಿದೆ.

ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾರರ ಕರಡು ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿಗಳಲ್ಲಿ ಮತ್ತು ಎಲ್ಲ ಗ್ರಾಮ ಪಂಚಾಯತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ www.ceokarnataka.kar.nic.in ದರಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ : ಬಿಪಿಎಲ್ ಪರಿಷ್ಕರಣೆ: ಜನರು ಆಕ್ರೋಶದಿಂದ ಎಚ್ಚೆತ ರಾಜ್ಯ ಸರ್ಕಾರ- ಬಿಪಿಎಲ್ ಕಾರ್ಡ್ ರದ್ದು ಮಾಡದಂತೆ ಸಿಎಂ ಸೂಚನೆ

ಆಯಾ ವಿಧಾನಸಭಾ ಮತಕ್ಷೇತ್ರದ ನಿಗದಿಪಡಿಸಿದ ಮತಗಟ್ಟೆಗಳಲ್ಲಿ, ಕಚೇರಿ ವೇಳೆಯಲ್ಲಿ ಅಕ್ಟೋಬರ 29 ರಿಂದ ನವೆಂಬರ್ 28 ರ ವರೆಗೆ ಮತದಾರರ ಪರಿಶೀಲನೆಗಾಗಿ ಲಭ್ಯವಿರುತ್ತದೆ. ಈ ಅವಧಿಯಲ್ಲಿ (ಅ.29 ರಿಂದ ನ.28) ಮತದಾರರು ಮತದಾರರ ಯಾದಿ ಪರಿಶೀಲಿಸಿ, ಮತದಾರಪಟ್ಟಿಗೆ ಹಕ್ಕು ಮತ್ತು ಆಕ್ಷಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಅವರು ಹೇಳಿದರು.

ಹೊಸದಾಗಿ ಹೆಸರು ಸೆರ್ಪಡೆಗೆ ಅರ್ಜಿ ನಮೂನೆ 6:

ದಿನಾಂಕ: 01-01-2025 ಕ್ಕೆ ಇರುವಂತೆ 18 ವರ್ಷ ವಯಸ್ಸು ಪೂರ್ಣಗೊಂಡಿರುವವರು, ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ. 6 ರಲ್ಲಿ ಸಲ್ಲಿಸಬಹುದು. ಹಾಗೂ 2025 ನೇ ವರ್ಷದ ಅರ್ಹತಾ ದಿನಾಂಕಗಳಾದ 1 ನೇ ಏಪ್ರಿಲ್, 2025, 1ನೇ ಜುಲೈ, 2025 ಅಥವಾ ಅಕ್ಟೋಬರ್, 2025 ನೇದ್ದಕ್ಕೆ 18 ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ದಿನಾಂಕದಿಂದ ನಮೂನೆ 6 ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅರ್ಜಿಗಳನ್ನು ಆಯಾ ತ್ರೈಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಲಾಗುವುದು. ಮತದಾರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಲು ನಮೂನೆ 6 ರಲ್ಲಿ ಅರ್ಜಿ ಸಲ್ಲಿಸುವ ಅರ್ಜಿದಾರನು ಅರ್ಜಿಗೆ ಇತ್ತೀಚಿನ ಪಾಸ್‌ಪೋರ್ಟಿ ಸೈಜ್ ಫೋಟೋ ಹಾಗೂ ವಿಳಾಸದ ಬಗ್ಗೆ, ದಾಖಲೆಗಳು ಹಾಗೂ ವಯಸ್ಸಿನ ಬಗ್ಗೆ, ದಾಖಲೆಗಳನ್ನು ಸಲ್ಲಿಸಬೇಕು.

ಹೆಸರು ತೆಗೆದು ಹಾಕಲು ಅರ್ಜಿ ನಮೂನೆ 7:

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕುವ ಸಲುವಾಗಿ ನಮೂನೆ 7 ರಲ್ಲಿ ಅರ್ಜಿ ಸಲ್ಲಿಸುವುದು.

ಅರ್ಜಿ ನಮೂನೆ 8:

ಮತದಾರರ ನಿವಾಸ ಬದಲಾವಣೆಯಿದ್ದಲ್ಲಿ (ಮತದಾರ ಪಟ್ಟಿಯ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸ್ಥಳಾಂತರವಾಗಿದ್ದಲ್ಲಿ), ಪ್ರಸ್ತುತ ಮತದಾರರ ಪಟ್ಟಿಯಲ್ಲಿರುವ ನಮೂದುಗಳ ಸರಿಪಡಿಸಬೇಕಾಗಿದ್ದಲ್ಲಿ, ಯಾವುದೇ ತಿದ್ದುಪಡಿಗಳಿಲ್ಲದೆ ಬದಲಿ ಮತದಾರರ ಗುರುತಿನ ಚೀಟಿ (ಎಪಿಕ್) ಅವಶ್ಯಕತೆ ಇದ್ದಲ್ಲಿ, ನಮೂನೆ 8 ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹಕ್ಕು, ಆಕ್ಷೇಪಣೆ ಸಲ್ಲಿಸಲು ನ.28 ರ ವರೆಗೆ ಅವಕಾಶ:

ಕರಡು ಮತದಾರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಎಚ್‌ ಮೊಬೈಲ್‌ ಆಯಪ್‌ ಮುಖಾಂತರ ಅಥವಾ WWW.Voters.eci.gov.in ರ ಮುಖಾಂತರ ಅಥವಾ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳ ಕಾರ್ಯಾಲಯ, ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯಗಳಲ್ಲಿ ನವೆಂಬರ್ 28, 2024 ರವರೆಗೆ ಸ್ವೀಕರಿಸಲಾಗುವುದು.

ಇದನ್ನೂ  ನೋಡಿ: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Janashakthi Media

Donate Janashakthi Media

Leave a Reply

Your email address will not be published. Required fields are marked *