ಬೆಂಗಳೂರು: ರಾಜ್ಯ ಸರ್ಕಾರ ಕಸ ವಿಲೇವಾರಿಗೆ ಬರುವ ತಿಂಗಳು 1ರಿಂದ ಹೊಸ ಯೋಜನೆ ರೂಪಿಸಲು ಮುಂದಾಗಿದೆ.
ಇನ್ನು ಮುಂದೆ ನಗರದಲ್ಲಿ ಕಸದ ಸಮಸ್ಯೆ ಕಂಡುಬಂದ್ರೆ ಬಿಬಿಎಂಪಿಯನ್ನು ಪ್ರಶ್ನೆ ಮಾಡೋ ಆಗಿಲ್ಲ. ಏಕೆಂದರೆ ಇದರ ವಿಲೇವಾರಿಗೆ ಅಂತ ಕಂಪನಿಯನ್ನು ಸ್ಥಾಪಿಸಲು ಸರ್ಕಾರ ಮುಂದಾಗಿದೆ.
ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಜಂಟಿಯಾಗಿ ನಿರ್ಮಾಣ ಮಾಡಿರೋ ಕಂಪನಿಯು ನಗರದಲ್ಲಿ ಕಸ ಸಂಗ್ರಹಣೆ, ಸಾಗಾಣಿಕೆ, ಹಾಗೂ ವಿಲೇವಾರಿ ಕಾರ್ಯ ಮಾಡುತ್ತಿವೆ. ಜೂ.1ರಿಂದ ಮನೆ ಮನೆಯಿಂದ ಅಟೋದಲ್ಲಿ ಕಸ ಸಂಗ್ರಹಣೆ ಮಾಡಿ ಟಿಪ್ಪರ್ ಲಾರಿಗಳ ಮೂಲಕ ಸಂಸ್ಕರಣಾ ಘಟಕ ಅಥವಾ ಕ್ವಾರಿಗಳಿಗೆ ಸಾಗಾಣಿಕೆ ಮಾಡಲಾಗುವುದು.
ಇದನ್ನು ಓದಿ : ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ; 23 ಆರೋಪಿಗಳ ಬಂಧನ
ಬಿಬಿಎಂಪಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರೋ ಆಟೋ, ಟಿಪ್ಪರ್, ಕಾಂಪ್ಯಾಕ್ಟರ್, ಚಾಲಕರು, ಸಹಾಯಕರು ಕಂಪನಿ ವ್ಯಾಪ್ತಿಗೆ ಘನತ್ಯಾಜ್ಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರೋ ಅಧಿಕಾರಿಗಳು, ವಾರ್ಡ್ ಮಟ್ಟದ ಎಂಜಿನಿಯರ್‌ಗಳು, ಸಿಬ್ಬಂದಿ ಹಾಗೂ ಮಾರ್ಷಲ್‌ಗಳು ಕಂಪನಿ ಅಧೀನಕ್ಕೆ ಇಷ್ಟು ಅಧಿಕಾರಿಗಳು, ಸಿಬ್ಬಂದಿ ವೇತನ ಕಂಪನಿಯಿಂದಲೇ ಪಾವತಿಸಲಿದೆ.
ನಗರದಲ್ಲಿರೋ 7 ಕಸ ಸಂಸ್ಕರಣಾ ಘಟಕಗಳು ಕಂಪನಿ ವ್ಯಾಪ್ತಿಗೆ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಪ್ರತಿ ವರ್ಷ ಕಂಪನಿಗೆ ಅಂತ ಅನುದಾನ ನೀಡಲಿದೆ. ಪೌರಕಾರ್ಮಿಕರು, ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ಅಧೀನದಲ್ಲೇ ಕಾರ್ಯನಿರ್ವಹಿಸಲಿದ್ದಾರೆ. ಪೌರಕಾರ್ಮಿಕರಿಗೆ, ಗುತ್ತಿಗೆ ಪೌರಕಾರ್ಮಿಕರಿಗೆ ಬಿಬಿಎಂಪಿಯಿಂದ ವೇತನ ಪಾವತಿಸಲಿದೆ.
ಪೌರಕಾರ್ಮಿಕರು ಕೇವಲ ಗುಡಿಸೋದು, ಸಾರ್ವಜನಿಕ ಸ್ಥಳಗಳನ್ನು ಕ್ಲಿನ್ ಮಾತ್ರ ಮಾಡುತ್ತಾರೆ. ಘನತ್ಯಾಜ್ಯ ಇಲಾಖೆಯನ್ನು ಆರೋಗ್ಯ ಇಲಾಖೆ ಜೊತೆ ವಿಲೀನ ಮಾಡಿ ಆದೇಶ ಸಹ ಹೊರಡಿಸಲು ಚಿಂತನೆ ನಡೆಸಲಾಗಿದೆ.
ಇದನ್ನು ನೋಡಿ : ಸಮಯಕ್ಕೆ ಸರಿಯಾಗಿ ಊಟ ಇಲ್ಲ, ಸೌಲಭ್ಯವೂ ಇಲ್ಲ : ಅಹೋರಾತ್ರಿ ವಿದ್ಯಾರ್ಥಿನಿಯರ ಪ್ರತಿಭಟನೆJanashakthi Media