ಮೈಸೂರು | MUDA ಹಗರಣದಲ್ಲಿ ಹೊಸ ತಿರುವು: 134 ಪ್ರಕರಣಗಳ ಮರುಚೇತನ

Please follow and like us:
ಮೈಸೂರು: ವಿವಾದಾತ್ಮಕ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ನಿವೇಶನ ಹಂಚಿಕೆ ಹಗರಣ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ತನಿಖೆ ಪುನರಾರಂಭವಾಗಿದ್ದು, ಇದು ಸೈಟ್ ಮಾರಾಟಗಾರರು ಹಾಗೂ ಲಾಭ ಪಡೆದವರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಮೈಸೂರು

ಹಗರಣಕ್ಕೆ ಸಂಬಂಧಿಸಿದ 134 ಪ್ರಕರಣಗಳಿಗೆ ತನಿಖೆಯನ್ನು ಲೋಕಾಯುಕ್ತ ಪುನರಾರಂಭಿಸಿದ್ದು, ಸೈಟ್ ಪಡೆದ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಹಗರಣವು 1,055 ಸೈಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದ್ದು, ಇದರಿಂದ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಹಣಕಾಸು ನಷ್ಟ ಉಂಟಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಫೆ.12ರ ಸಾರ್ವತ್ರಿಕ ಮುಷ್ಕರಕ್ಕೆ ಸಿ.ಪಿ.ಐ(ಎಂ) ಬೆಂಬಲ

ಸೈಟ್ ಹಂಚಿಕೆಯಲ್ಲಿ ಕಾನೂನು ಉಲ್ಲಂಘನೆ ಮತ್ತು ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದನ್ನು ಲೋಕಾಯುಕ್ತ ಪರಿಶೀಲಿಸುತ್ತಿದೆ.

ಇದರಂತೆ ಮುಡಾದ ಮಾಜಿ ಆಯುಕ್ತರಾದ ದಿನೇಶ್, ನಟೇಶ್ ಸೇರಿದಂತೆ ಹಲವು ಅಧಿಕಾರಿಗಳು, ಇತರರಿಗೆ ನೋಟಿಸ್ ಜಾರಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರು, ಆರೋಪಿಗಳು ಮತ್ತು ಲಾಭಪಡೆದವವರಿಗೆ ಸಮನ್ಸ್ ನೀಡಿ, ತನಿಖೆಗೆ ಸಹಕರಿಸಿ ಅಗತ್ಯ ದಾಖಲೆಗಳು ಮತ್ತು ಸ್ಪಷ್ಟೀಕರಣ ನೀಡುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಗುತ್ತಿಗೆ ಜೀವನಕ್ಕೆ ಅಂತ್ಯ ಬೇಕು – ಫೆ 12ಕ್ಕೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಮುಷ್ಕರ | ಎಸ್ ವರಲಕ್ಷ್ಮಿ

Please follow and like us:
Donate Janashakthi Media

Leave a Reply

Your email address will not be published. Required fields are marked *