ನ್ಯೂಜೆರ್ಸಿ: ಅಮೆರಿಕದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಕೈಗೆ ಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ನ್ಯೂಜೆರ್ಸಿಯ ನ್ಯೂವಾರ್ಕ್ ವಿಮಾನ ನಿಲ್ದಾಣದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಭಾರತೀಯ ವಿದ್ಯಾರ್ಥಿಯನ್ನು ಗಡೀಪಾರು ಮಾಡುವ ಮುನ್ನಾ ಆತನ ಕೈಗೆ ಕೋಳ ಹಾಕಿ ನೆಲಕ್ಕೆ ಒತ್ತುವ ವೀಡಿಯೊಗಳು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣ ಬಳಕೆದಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಭಾರತೀಯ-ಅಮೆರಿಕನ್ ಉದ್ಯಮಿ ಕುನಾಲ್ ಜೈನ್ ಎಂಬವರು ಈ ವೀಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ನಾಲ್ವರು ಅಧಿಕಾರಿಗಳು ವಿದ್ಯಾರ್ಥಿಯನ್ನು ಹಿಡಿದಿಟ್ಟುಕೊಂಡಿದ್ದಾರೆ. ಅವರಲ್ಲಿ ಇಬ್ಬರು ತಮ್ಮ ಮೊಣಕಾಲುಗಳನ್ನು ವಿದ್ಯಾರ್ಥಿ ಬೆನ್ನಿನ ಮೇಲೆ ಇಟ್ಟುಕೊಂಡಿದ್ದು, ವಿದ್ಯಾರ್ಥಿಯ ಕಾಲುಗಳು ಮತ್ತು ಕೈಗಳನ್ನು ಕಟ್ಟಿ ಹಾಕಿದ್ದಾರೆ. ನಿನ್ನೆ ರಾತ್ರಿ ನ್ಯೂವಾರ್ಕ್ ವಿಮಾನ ನಿಲ್ದಾಣದಿಂದ ಯುವ ಭಾರತೀಯ ವಿದ್ಯಾರ್ಥಿಯನ್ನು ಗಡೀಪಾರು ಮಾಡುವುದನ್ನು ನಾನು ನೋಡಿದೆ. ಕೈಕೋಳ ಹಾಕಿ ಆತನನ್ನು ಅಪರಾಧಿಯಂತೆ ನಡೆಸಿಕೊಂಡಿದ್ದಾರೆ. ಆತ ಕನಸುಗಳನ್ನು ಹೊತ್ತು ಬಂದಿದ್ದ. ಒಬ್ಬ ಅನಿವಾಸಿ ಭಾರತೀಯನಾಗಿ, ನಾನು ಅಸಹಾಯಕನಾದೆ. ಇದು ಮಾನವ ದುರಂತ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಜೈನ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಬಣ್ಣ ಬದಲಿಸಿದ ನಮ್ಮ ಮೆಟ್ರೋ ರೈಲುಗಳು; ಬಿಎಂಟಿಸಿ ಬಸ್ ಮಾದರಿಯಲ್ಲಿಯೇ ಮೈತುಂಬಾ ಜಾಹೀರಾತು
I witnessed a young Indian student being deported from Newark Airport last night— handcuffed, crying, treated like a criminal. He came chasing dreams, not causing harm. As an NRI, I felt helpless and heartbroken. This is a human tragedy. @IndianEmbassyUS #immigrationraids pic.twitter.com/0cINhd0xU1
— Kunal Jain (@SONOFINDIA) June 8, 2025
ವಿಷಯದ ಬಗ್ಗೆ ತನಿಖೆ ಮಾಡಲು ಮತ್ತು ವಿದ್ಯಾರ್ಥಿಗೆ ಸಹಾಯ ಮಾಡಲು ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಜೈನ್ ಮನವಿ ಮಡಿಕೊಂಡಿದ್ದಾರೆ.
ಇದನ್ನೂ ನೋಡಿ : ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ ಮತ್ತು ಕೆ ಎಸ್ ವಿಮಲಾ ಮಾತುಕತೆJanashakthi