ಬೆಂಗಳೂರು: ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ಪೊಲೀಸರು ಸೆಪ್ಟೆಂಬರ್ 12ರಂದು ನಗರದಲ್ಲಿ ಬಂಧಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊ ಎಡಿಟ್ ಮಾಡಿ ಮುಖ್ಯಮಂತ್ರಿಗಳೇ, “ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿ ಮೇಲೆ ಬುಲ್ಡೋಜರ್ ನುಗ್ಗಿಸಿ ” ಎಂದು ಬರೆಯಲಾದ ಪೋಸ್ಟರ್ ಅನ್ನು ಮಹೇಶ್ ವಿಕ್ರಂ ಹೆಗ್ಡೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು.
ಇದನ್ನೂ ಓದಿ: ಟ್ರಂಪ್ ಸುಂಕ-ಭಯೋತ್ಪಾದನೆಯ ಪಾಠಗಳು
ಎರಡು ಗುಂಪುಗಳ ನಡುವೆ ದ್ವೇಷ ಭಾವನೆ ಮೂಡಿಸಿ ಕೋಮುಗಲಭೆ ಸೃಷ್ಟಿಸುವ ಹಾಗೂ ಸಮಾಜದ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಉದ್ದೇಶದಿಂದ ಈ ಪೋಸ್ಟ್‌ನ್ನು ಹಾಕಿರುವ ಬಗ್ಗೆ ಬಿಎನ್‌ಎಸ್ ಸೆಕ್ಷನ್ 353 (2) ಅಡಿ ಮೂಡುಬಿದಿರೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಅದರಂತೆ, ಬೆಂಗಳೂರಿಗೆ ತೆರಳಿದ ಪೊಲೀಸರು ಆರೋಪಿ ಮಹೇಶ್ ವಿಕ್ರಂ ಹೆಗ್ಡೆಯನ್ನು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಆತನಿಗೆ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಇದನ್ನು ನೋಡಿ: ಬಿಹಾರದಲ್ಲಿ ಸರ್ (SIR) ಸೃಷ್ಟಿಸಿದ ಸುಳ್ಳು ಕಥೆಗಳು – ವಿಶ್ಲೇಷಣೆ : ಗುರುರಾಜ ದೇಸಾಯಿ Janashakthi Media
