ತ್ಯಾಜ್ಯ ನಿರ್ವಹಣೆಯಲ್ಲಿ ವಿಫಲ: ಕರ್ನಾಟಕಕ್ಕೆ 2900 ಕೋಟಿ ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ನವದೆಹಲಿ: ತ್ಯಾಜ್ಯ ನಿರ್ವಹಣೆಯಲ್ಲಿ ಕರ್ನಾಟಕ ಸರ್ಕಾರವು ವಿಫಲವಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ(ಎನ್‌ಜಿಟಿ)ಯು 2,900 ಕೋಟಿ ರೂ ದಂಡ ವಿಧಿಸಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶ ನಿಡಿದೆ. ಎನ್‌ಜಿಟಿ ಕಾಯಿದೆಯ ಸೆಕ್ಷನ್ 15 ರ ಅಡಿಯಲ್ಲಿ ಪರಿಹಾರ ನೀಡುವಂತೆ ಆದೇಶ ನೀಡಿದೆ.

ಪರಿಸರಕ್ಕೆ ಹಾನಿ ಉಂಟುಮಾಡುವ ಘನ ಮತ್ತು ದ್ರವ ತ್ಯಾಜ್ಯವನ್ನು ನಿರ್ವಹಿಸದ ಆರೋಪದ ಮೇಲೆ ದಂಡವನ್ನು ವಿಧಿಸಲಾಗಿದೆ. ಘನ, ದ್ರವ ತ್ಯಾಜ್ಯದ ನಿರ್ವಹಣೆ ಸರಿಯಾಗಿ ಆಗಿಲ್ಲ, ಈ ಬಗ್ಗೆ ಸರ್ವಾಜನಿಕವಾಗಿ ವ್ಯಾಪಕ ಅಕ್ರೋಶ ವ್ಯಕ್ತವಾಗುತ್ತಿದೆ ಎಂದು ಎನ್‌ಜಿಟಿ ಹೇಳಿದೆ. ಕಳೆದ ಐದು ವರ್ಷಗಳಿಂದ ನಿರ್ವಹಣೆಯಲ್ಲಿ ಸ್ಪಷ್ಟ ಫಲಿತಾಂಶ ಬಂದಿಲ್ಲ ಎಂದು ಹೇಳಿದೆ.

ಮುಂದುವರಿದ ಹಾನಿಯನ್ನು ಭವಿಷ್ಯದಲ್ಲಿ ತಡೆಗಟ್ಟುವ ಅಗತ್ಯವಿದೆ ಹಿಂದಿನ ಹಾನಿಯನ್ನು ಮರುಸ್ಥಾಪಿಸಬೇಕಾಗಿದೆ. 2,900 ಕೋಟಿ ರೂ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶವನ್ನು ನೀಡಿದೆ.

ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ ಈ ಆದೇಶವನ್ನು ನೀಡಿದ್ದು. ಈ ಹಿಂದೆ ಪಂಜಾಬ್ ಸರಕಾರ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡಿಲ್ಲ ಎಂದು 2000 ಕೋಟಿ ದಂಡ ವಿಧಿಸಿತ್ತು. ಇದೇ ರೀತಿ ರಾಜಸ್ಥಾನ ಸರಕಾರಕ್ಕೆ 3,000 ಕೋಟಿ‌ ದಂಡ ವಿಧಿಸಿದೆ.

ಪರಿಸರದ ಮೇಲಿನ ನಿರಂತರ ಹಾನಿಯನ್ನು ತಡೆಯಲು, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ನಿಯಮಗಳನ್ನು ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನಗಳನ್ನು ಅನುಸರಿಸಲು ಈ ನ್ಯಾಯಮಂಡಳಿ ಮೇಲ್ವಿಚಾರಣೆ ಮಾಡುವ ಎನ್‌ಜಿಟಿ ಕಾಯ್ದೆಯ ಸೆಕ್ಷನ್ 15 ರ ಅಡಿಯಲ್ಲಿ ಪರಿಹಾರವನ್ನು ನೀಡುವುದು ಅಗತ್ಯವಾಗಿದೆ ಎಂದು ನ್ಯಾಯಮಂಡಳಿ ಹೇಳಿದೆ.

ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 2, 2014 ರ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮತ್ತು ದ್ರವ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ 2017 ರ ಫೆಬ್ರವರಿ 22 ರ ಆದೇಶಕ್ಕೆ ಸಂಬಂಧಿಸಿದಂತೆ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಸಮಸ್ಯೆಗಳನ್ನು ನ್ಯಾಯಮಂಡಳಿಯು ಮೇಲ್ವಿಚಾರಣೆ ಮಾಡುತ್ತಿದೆ.

ಅಗತ್ಯವಾದ ಪ್ರಮಾಣೀಕೃತ ಹೊಣೆಗಾರಿಕೆಯನ್ನು ನಿಗದಿಪಡಿಸದೆ, ಕೇವಲ ಆದೇಶಗಳನ್ನು ರವಾನಿಸುವುದರಿಂದ ಕಳೆದ ಎಂಟು ವರ್ಷಗಳಲ್ಲಿ (ಘನತ್ಯಾಜ್ಯ ನಿರ್ವಹಣೆಗಾಗಿ) ಮತ್ತು ಐದು ವರ್ಷಗಳಲ್ಲಿ (ದ್ರವ ತ್ಯಾಜ್ಯ ನಿರ್ವಹಣೆಗಾಗಿ) ಶಾಸನಬದ್ಧ/ ಅವಧಿ ಮುಗಿದ ನಂತರವೂ ಯಾವುದೇ ಸ್ಪಷ್ಟವಾದ ಫಲಿತಾಂಶಗಳನ್ನು ತೋರಿಸಿಲ್ಲ ಎಂದು ಉಲ್ಲೇಖಿಸಿದೆ.

Donate Janashakthi Media

Leave a Reply

Your email address will not be published. Required fields are marked *