ಬೆಂಗಳೂರು : ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಾತ್ರಿ 9ರಿಂದ ಮೇ4 ಬೆಳಗ್ಗೆ 6ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.
ಎ.21ರಿಂದ ಪ್ರತಿ ದಿನ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಈ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.
ಎಲ್ಲಾ ಶಾಲೆ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ಸ್ವಿಮ್ಮಿಂಗ್ ಪೂಲ್, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಯೋಗ ಕೇಂದ್ರ, ಜಿಮ್, ಕ್ರೀಡಾ ಸಂಕೀರ್ಣ, ಪಾರ್ಕ್, ಧಾರ್ಮಿಕ ಕೇಂದ್ರಗಳನ್ನು ಬಂದ್ ಮಾಡಲಾಗುವುದು. ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಸಭೆಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಸಿನಿಮಾ ಹಾಲ್‌ಗಳು, ಸ್ವೀಮಿಂಗ್ ಪೂಲ್‌ಗಳನ್ನು ಬಂದ್ ಮಾಡಲಾಗಿದೆ. ಬಾರ್ ಅಂಡ್ ರೆಸ್ಟೋರೆಂಟ್‌ಗಳಲ್ಲಿ ಪಾರ್ಸಲ್‌ಗಳನ್ನು ತೆಗೆದುಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಕಟಿಂಗ್ ಶಾಪ್, ಸಲೂನ್, ಬ್ಯೂಟಿ ಪಾಲರ್ಸ್ ತೆಗೆಯಲು ಅವಕಾಶ ನೀಡಲಾಗಿದೆ. ಮದುವೆಯಲ್ಲಿ 50 ಮಂದಿ ಭಾಗವಹಿಸಲು ಮಾತ್ರ ಅವಕಾಶ, ಏಪ್ರಿಲ್ 23ರ ನಂತರ ಮಾರುಕಟ್ಟೆಗಳನ್ನು ಸ್ಥಳಾಂತರ ಮಾಡಲಾಗುವುದು, ಇದಲ್ಲದೇ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ 20 ಮಂದಿಗೆ ಅವಕಾಶ, ಮಂದಿರ ಮಸೀದಿ, ಚರ್ಚ್‌ಗಳಲ್ಲಿ ಪೂಜೆ ಮಾಡುವವರಿಗೆ ಕೂಡ ಅವಕಾಶವಿದ್ದು, ಭಕ್ತರಿಗೆ ಅವಕಾಶ ಇರೋದಿಲ್ಲ ಅಂತ ಹೇಳಿದರು.