ರಾತ್ರಿ ಕರ್ಫ್ಯೂ ತೆರವು: ರಿಯಾಯಿತಿ-ನಿರ್ಬಂಧಗಳ ಬಗ್ಗೆ ಕೈಗೊಂಡ ವಿವರಗಳು

ಬೆಂಗಳೂರು: ರಾಜ್ಯದಲ್ಲಿ ಜನವರಿ 31ರ ಬಳಿಕ ಹಲವು ಕೋವಿಡ್‌ ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಇಂದು ಕೋವಿಡ್ ನಿಯಂತ್ರಣದ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಸಚಿವ ಆರ್ ಅಶೋಕ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಆನಂದ್ ಸಿಂಗ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಸೇರಿ ಪ್ರಮುಖರು ಭಾಗವಹಿಸಿದ್ದರು.

ಸಭೆಯಲ್ಲಿ ಕೈಗೊಂಡ ತೀರ್ಮಾನಗಳನ್ನು ತಿಳಿಸಿದ ಸಚಿವ ಆರ್​. ಅಶೋಕ್ ಜನವರಿ 31 ರಿಂದ ರಾತ್ರಿ ಕರ್ಫ್ಯೂ ತೆರವು ಮಾಡಲಾಗುತ್ತದೆ ಎಂದು ತಿಳಿಸಿದ್ಧಾರೆ.

ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳು

ಹೋಟೆಲ್, ಬಾರ್, ಕ್ಲಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಣೆ

ಜಾತ್ರೆ, ಮಹೋತ್ಸವ, ಮೆರವಣಿಗೆ ಹೇರಲಾದ ನಿಷೇಧ ಮುಂದುವರಿಕೆ

ಕ್ರೀಡೆ 50:50 ಮುಂದುವರಿಕೆ, ಸ್ಟೆಡಿಯಂನಲ್ಲಿ 50:50 ಮುಂದುವರಿಕೆ

ಈಜುಕೊಳದ ಕಾರ್ಯಾಚರಣೆ 50:50 ಮುಂದುವರಿಕೆ

ಬೆಂಗಳೂರು ನಗರದಲ್ಲಿ ಜನವರಿ 31 ರಿಂದ ಶಾಲೆ, ಕಾಲೇಜುಗಳು ಆರಂಭ

ಮೆಟ್ರೋ ರೈಲು ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳು ತಮ್ಮ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರೊಂದಿಗೆ ಕಾರ್ಯಾಚರಣೆ ನಡೆಸಬಹುದು.

ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ  ಒಳಾಂಗಣದಲ್ಲಿ 200 ಜನರಿಗೆ ಅವಕಾಶ.

ಸರ್ಕಾರದ ಸಚಿವಾಲಯದಲ್ಲಿ ಶೇ.100ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಬಹುದು.

ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ ನೀಡಲಾಗುವುದು. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶಾವಕಾಶ ಕಲ್ಪಿಸಲಾಗುವುದು.

ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25 ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧರಿಸಲಾಗಿದೆ

ಕೋವಿಡ್ ಹೊರತು ಪಡಿಸಿ, ಇತರ ಚಿಕಿತ್ಸೆಗಳನ್ನು ಸಮರ್ಪಕವಾಗಿ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಶಾಲೆಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಶಾಲೆಯಲ್ಲಿ ಸೋಂಕು ಕಂಡುಬಂದಲ್ಲಿ ಅದರ ಆಧಾರದ ಮೇಲೆ ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳುತ್ತಾರೆ.

ಪ್ರವಾಸಿತಾಣಗಳ ಭೇಟಿಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಕೋವಿಡ್​ ನಿಯಮ ಪಾಲಿಸಿ ಪ್ರವಾಸಿಗರು ಭೇಟಿ ನೀಡಬಹುದು. ರಾಜ್ಯದ ಪ್ರವಾಸಿತಾಣಗಳು ಪ್ರವಾಸಿಗರಿಗೆ ಮುಕ್ತವಾಗಿರಲಿವೆ. ಸಫಾರಿ ಸೇರಿದಂತೆ ಎಲ್ಲಾ ಚಟುವಟಿಕೆಗೆ ಅವಕಾಶ ಇರುತ್ತದೆ ಅಂತ ಹೇಳಿದ್ದಾರೆ.

ತಜ್ಞರ ವರದಿ ಆಧಾರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕೋವಿಡ್‌ ಸೋಂಕಿತರ ಗುಣಮುಖರಾಗುವವರ ಸಂಖ್ಯೆ ಹೆಚ್ಚಾಗಿದೆ. ಆದರೆ, ಸೋಂಕಿನ ತೀವ್ರತೆ ಹೆಚ್ಚಿಲ್ಲ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕೂಡ ಕಡಿಮೆಯಿದೆ. ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇ. 2ಕ್ಕೆ ಇಳಿದಿದೆ ಎಂದು ಆರ್​. ಅಶೋಕ್ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *