ಬೆಂಗಳೂರು: ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ತೆರವಾಗಿರುವ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ 24*7 ರಾಜಕಾರಣಿಯಾಗುತ್ತೇನೆ ಎಂದಿರುವ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ಸ್ವತಃ ನಿಖಿಲ್ ಕುಮಾರಸ್ವಾಮಿ ಪುಷ್ಠಿ ನೀಡಿದ್ದು, ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಆಗಬೇಕೆಂದು ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದರು. ಚನ್ನಪಟ್ಟಣ
ನಗರದಲ್ಲಿ ಸುದ್ದಿಗೋಷ್ಠಿಯನ್ನದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಸ್ಪರ್ಧೆ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ರಾಜ್ಯ, ರಾಷ್ಟ್ರೀಯ ನಾಯಕರು ಕೂತು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.ಎರಡೂ ಪಕ್ಷಗಳ ನಾಯಕರ ಅಭಿಪ್ರಾಯ ಪಡೆದು ಅಂತಿಮವಾಗಿ ಆ ವರದಿಯನ್ನು ವರಿಷ್ಠರಿಗೆ ಸಲ್ಲಿಕೆ ಮಾಡುತ್ತೇವೆ. ಸದ್ಯಕ್ಕೆ ಅಲ್ಲಿ ನನ್ನ ಸ್ಪರ್ಧೆ ಚರ್ಚೆ ಅಪ್ರಸ್ತುತ. ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್ ಕೂಡ ಮೈತ್ರಿ ಅಭ್ಯರ್ಥಿ ಗೆಲುವಿಗೆ ಕಾರಣರಾಗಿದ್ದಾರೆ. ಹೀಗಾಗಿ ಅಂತಿಮವಾಗಿ ಅಭ್ಯರ್ಥಿ ಯಾರಾಗಬೇಕೆಂದು ಎರಡು ಪಕ್ಷಗಳ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ನಿಖಿಲ್ ಹೇಳಿದರು.
ಇನ್ನು ಹಾಸನ ಲೋಕಸಭಾ ಕ್ಷೇತ್ರದ ಸೋಲಿನ ಬಗ್ಗೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ, ಈ ಸೋಲನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಚುನಾವಣೆಯಲ್ಲಿ ಗೆಲುವು ಸೋಲು ಸಹಜ. ಸೋತ ಮಾತ್ರಕ್ಕೆ ನಾವು ಕೈ ಕಟ್ಟಿ ಮನೆಯಲ್ಲಿ ಕೂರುವುದಿಲ್ಲ. ಹಾಸನದಲ್ಲಿ ಪಕ್ಷವನ್ನು ನಂಬಿಕೊಂಡ ಹಲವಾರು ಕಾರ್ಯಕರ್ತರು ಇದ್ದಾರೆ. ಈ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ. ಹಾಸನ ಜಿಲ್ಲೆಯಲ್ಲಿ ಮುಂದೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷವನ್ನು ಬಲಪಡಿಸುವುದಾಗಿ ಹೇಳಿದರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಕೋಲಾರ ಕ್ಷೇತ್ರದ ನೂತನ ಸಂಸದ ಮಲ್ಲೇಶ್ ಬಾಬು ಹಾಗೂ ರಾಜ್ಯದಲ್ಲಿ ಗೆದ್ದಿರುವ ಮೈತ್ರಿಕೂಟದ ಎಲ್ಲಾ ಸಂಸದರು, ವಿಧಾನ ಪರಿಷತ್ ಚುನಾವಣೆಯಲ್ಲಿ ಗೆದ್ದ ಎಸ್.ಎಲ್.ಭೋಜೆಗೌಡರು, ಕೆ.ವಿವೇಕಾನಂದ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಚನ್ನಪಟ್ಟಣ
ಕುಮಾರಸ್ವಾಮಿ ಗೆಲುವಿಗೆ ಕಾರಣರಾಗಿರುವ ಮಂಡ್ಯ ಜಿಲ್ಲೆಯ ಎಲ್ಲ ಜನತೆ, ನಾಯಕರಿಗೆ ಧನ್ಯವಾದಗಳನ್ನು ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ, 2018ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯ ಶಾಸಕರನ್ನು ಆಯ್ಕೆ ಮಾಡಿದ್ದರು. ಅದೇ ರೀತಿ ಈ ಸಲ ಕುಮಾರಸ್ವಾಮಿ ಅವರನ್ನು ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ. ರಾಮನಗರದಲ್ಲಿ ರಾಜಕೀಯ ಬದುಕನ್ನು ಕಟ್ಟಿಕೊಟ್ಟ ಜನತೆಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ಹೇಳಿದರು. ಚನ್ನಪಟ್ಟಣ
ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಪರವಾಗಿ ದೇಶದ ಮತ್ತು ರಾಜ್ಯದ ಜನತೆ ಐತಿಹಾಸಿಕ ತೀರ್ಪು ನೀಡಿದ್ದಾರೆ. ಕಳೆದ ಎರಡು ಅವಧಿಗಳಲ್ಲಿ ಮೋದಿ ಅವರು ಅನೇಕ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಮೋದಿಯವರು ಪ್ರಧಾನಿ ಆಗಲು ಜನ ತೀರ್ಪು ನೀಡಿದ್ದಾರೆ. ನಮ್ಮ ರಾಜ್ಯದಲ್ಲಿ ದೇವೇಗೌಡರು ಮೋದಿ ಅವರ ನಾಯಕತ್ವ ಮೆಚ್ಚಿ ಮೈತ್ರಿ ಭಾಗವಾಗಲು ತೀರ್ಮಾನ ಮಾಡಿದರು. ಚಾಮರಾಜನಗರ, ಹಾಸನ ಹೊರತುಪಡಿಸಿ ಹಳೇ ಮೈಸೂರು ಭಾಗದಲ್ಲಿ ಎಲ್ಲಾ ಕಡೆ ಮೈತ್ರಿ ಯಶಸ್ವಿಯಾಗಿದೆ. ಜನತೆಯ ವಿಶ್ವಾಸ ಉಳಿಸಿಕೊಳ್ಳುತ್ತೇವೆ ಎಂದು ನಿಖಿಲ್ ತಿಳಿಸಿದರು. ಚನ್ನಪಟ್ಟಣ
ಇದನ್ನು ಓದಿ : ಎನ್‌ಡಿಎ ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಕೋಪಗೊಂಡ ಮಿತ್ರಪಕ್ಷ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ
ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದು ಸುದ್ದಿಗಾರರ ಪಪ್ರಶ್ನೆಯೊಂದಕ್ಕೆ ನಿಖಿಲ್ ಕುಮಾರಸ್ವಾಮಿ ಉತ್ತರಿಸಿದರು.
ಸಂಸದರಾಗಿ ಆಯ್ಕೆ ಬಳಿಕ ಇದೇ ಹೆಚ್ಡಿಕೆ ಇದೇ ಭಾನುವಾರ ತಮಗೆ ರಾಜಕೀಯ ಪುನರ್‌ಜನ್ಮ ನೀಡಿದ ರಾಮನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಳಿಕ ತಮಗೆ ರಾಜಕೀಯ ಶಕ್ತಿ ತುಂಬಿದ ಮಂಡ್ಯದಲ್ಲಿ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ. ಎರಡೂ ಕಡೆ ನಮ್ಮ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಭೆಗಳನ್ನು ಹಮ್ಮಿಕೊಂಡಿದ್ದಾರೆ.ಕುಮಾರಸ್ವಾಮಿ ಅವರು ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ. ಎರಡು ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಬಡವರ ಪರ, ರೈತರ ಪರ ಕೆಲಸ ಮಾಡಿರುವ ಕುಮಾರಸ್ವಾಮಿ ಅವರಿಗೆ ಈ ಅವಕಾಶ ದೊರಕಿರುವುದು ಅತ್ಯಂತ ಸಂತೋಷದ ಸಂಗತಿ. ಅತ್ಯಂತ ಪ್ರಮುಖ ಸ್ಥಾನವನ್ನು ಕುಮಾರಸ್ವಾಮಿ ಅವರಿಗೆ ಕೊಟ್ಟಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ನಿರೀಕ್ಷೆ ಇದೆ, ವಿಶ್ವಾಸ ಇದೆ. ಕುಮಾರಸ್ವಾಮಿ ಅವರು ಈಗಾಗಲೇ ಕೆಲಸ ಆರಂಭ ಮಾಡಿದ್ದಾರೆ. ಬೆಳಗ್ಗೆ ಆರು ಗಂಟೆಗೆ ಎದ್ದು ಕೆಲಸ ಮಾಡುತ್ತಿದ್ದಾರೆ. ಉಕ್ಕು ಸಚಿವಾಲಯದಲ್ಲಿ ನಮ್ಮ ರಾಜ್ಯಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸಹಿ ಹಾಕುವ ಮೂಲಕ ಕೆಲಸ ಆರಂಭ ಮಾಡಿದ್ದಾರೆ ಎಂದು ನಿಖಿಲ್ ತಿಳಿಸಿದರು.
ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳುವೆ. 2019ರಲ್ಲಿ ಅನಿರೀಕ್ಷಿತವಾಗಿ ನಾನು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾದೆ. ರಾಜಕಾರಣ ದೊಡ್ಡ ಜವಾಬ್ದಾರಿ. ಪ್ರಾದೇಶಿಕ ಪಕ್ಷ ನಿಭಾಯಿಸುವ ಜವಾಬ್ದಾರಿ ಕೂಡ ದೊಡ್ಡದು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇನೆ. ಸಿನಿಮಾಗಳಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದೇನೆ ಎಂದರು. ಚನ್ನಪಟ್ಟಣ
ಇನ್ನು ರೌಡಿಶೀಟರ್ ನಟದರ್ಶನ್ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಿಖಿಲ್, ನಮ್ಮ ನಡೆ ಉತ್ತಮವಾಗಿ ಇರಬೇಕು. ಸಾರ್ವಜನಿಕ ಜೀವನಕ್ಕೆ ಬಂದ ಮೇಲೆ ಜನ ನಮ್ಮನ್ನು ಗಮನಿಸುತ್ತಿರುತ್ತಾರೆ. ನಮ್ಮ ನಡೆ ಉತ್ತಮವಾಗಿ ಇರುವಂತೆ ನೋಡಿಕೊಳ್ಳಬೇಕು. ಅವರ ಪ್ರಕರಣ ಈಗಾಗಲೇ ತನಿಖೆ ನಡೆಯುತ್ತಿದೆ. ಈಗಲೇ ಆ ವಿಚಾರದ ಬಗ್ಗೆ ಮಾತನಾಡುವುದು ಸೂಕ್ತ ಅಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯ ಜವರಾಯಿಗೌಡ, ಮಾಜಿ ಶಾಸಕರಾದ ಅಶ್ವಿನ್ ಕುಮಾರ್, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಉಪಸ್ಥಿತರಿದ್ದರು. ಚನ್ನಪಟ್ಟಣ
ಇದನ್ನು ನೋಡಿ : ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ 18 ಕ್ಷೇತ್ರಗಳಲ್ಲಿ 15ರಲ್ಲಿ ಎನ್‌ಡಿಎ ಗೆ ಸೋಲು