ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ಮುನ್ನಲೆಗೆ ಬಂದಿವೆ. ಪ್ರಚಾರದ ಆರಂಭಕ್ಕೆ ಸಿದ್ದತೆ ನಡೆಸಿರುವ ಜೆಡಿಎಸ್ ಹಲವು ಲೆಕ್ಕಾಚಾರಗಳನ್ನು ಹಾಕುತ್ತಿದೆ ಎಂದು ಹೇಳಲಾಗುತ್ತಿದೆ. ಸೋತ
ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಪಕ್ಷೇತರರಾಗಿ ಕಣಕ್ಕಿಳಿದಿದ್ದ ಸುಮಲತಾ ಅಂಬರೀಶ್ ವಿರುದ್ಧ ಸೋತಿದ್ದರು. ಆ ಬಳಿಕ ರಾಮನಗರ ವಿಧಾನಸಭಾ ಕ್ಷೇತ್ರದಿಂದಲೂ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಗೆ ಗೆಲುವು ಸಿಕ್ಕಿರಲಿಲ್ಲ. ಈ ಹಿಂದೆ ಮಂಡ್ಯ ಜನರೊಟ್ಟಿಗೆ ಇರುವುದಾಗಿ ಹೇಳಿದ್ದ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಯ ಕೆಲಸಗಳನ್ನು ಸದ್ದಿಲ್ಲದೆ ಆರಂಭಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮದ್ದೂರು ತಾಲೂಕಿನಿಂದ ಚಾಲನೆ ನೀಡಲಿದ್ದಾರೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿರುವುದು ರಾಜಕೀಯ ವಲಯದಲ್ಲಿ ವಿಶೇಷ ಚರ್ಚೆಯನ್ನು ಹುಟ್ಟುಹಾಕಿದೆ. ಸೋತಲ್ಲೆ ಗೆಲ್ಲಲು ರಣತಂತ್ರ ರೂಪಿಸಿದ್ದು, ಮಂಡ್ಯ ಜೆಡಿಎಸ್ ಪಾಳಯದಲ್ಲಿ ಸಿದ್ಧತೆ ನಡೆಯುತ್ತಿವೆ. ಈ ತಿಂಗಳ ಅಂತ್ಯಕ್ಕೆ ಜಿಲ್ಲೆಯಾದ್ಯಂತ ನಿಖಿಲ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಡಿ.ಸಿ ತಮ್ಮಣ್ಣ ಹೇಳಿದ್ದಾರೆ. ಜೆಡಿಎಸ್ ವರಿಷ್ಠರಿಂದಲೇ ಸೂಚನೆ ಲಭ್ಯವಾದ ಹಿನ್ನೆಲೆಯಲ್ಲಿ ನಿಖಿಲ್ ಪ್ರವಾಸಕ್ಕೆ ತಯಾರಿ ಆರಂಭವಾಗಿದೆ ಎಂಬ ಸುಳಿವನ್ನು ಅವರು ನೀಡಿದ್ದಾರೆ.
ಇದನ್ನೂ ಓದಿ : ಬಿಜೆಪಿ-ಜೆಡಿಎಸ್ ಮೈತ್ರಿ | ಹೆಚ್.ಡಿ.ಕುಮಾರಸ್ವಾಮಿ-ವಿಜಯೇಂದ್ರ ಸಮಾಲೋಚನೆ
ಕುಮಾರಸ್ವಾಮಿ ಅಥವಾ ನಿಖಿಲ್ ಇಬ್ಬರಲ್ಲಿ ಯಾರಾದರೂ ಒಬ್ಬರು ಮಂಡ್ಯದಿಂದ ಕಣಕ್ಕೆ ಇಳಿಯಲೇಬೇಕು ಎಂಬ ಒತ್ತಡ ದಳ ಕಾರ್ಯಕರ್ತರಿಂದ ಆರಂಭದಿಂದಲೂ ಕೇಳಿ ಬರುತ್ತಲೇ ಇತ್ತು. ಇದರಿಂದ ಮಂಡ್ಯದಲ್ಲಿ ಜೆಡಿಎಸ್ ಹಳೆ ಲಯಕ್ಕೆ ಮರಳಿದೆ. ಅಗ್ರನಾಯಕರು ಸ್ಪರ್ಧೆ ಮಾಡಿದ್ರೆ ಮಂಡ್ಯ ಗೆಲ್ಲುವು ಸುಲಭ ಆಗುತ್ತೆ ಎಂಬ ಲೆಕ್ಕಾಚಾರವೂ ದಳ ನಾಯಕರ ಮುಂದಿದ್ದು ಗೆಲ್ಲುವ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವುದು ಬೇಡ ಎಂದು ಮಂಡ್ಯ ಕಾರ್ಯಕರ್ತರು ಕುಮಾರಸ್ವಾಮಿ ಬಳಿ ಮನವಿ ಮಾಡಿದ್ದಾರೆ.
ಸಂಸದೆ ಸುಮಲತಾ ಕೂಡ ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಕ್ಷೇತ್ರವನ್ನು ತಮಗೆ ಬಿಟ್ಟುಕೊಡಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ನಿಖಿಲ್ ಕುಮಾರ್ ಸ್ವಾಮಿ ನಡೆ ಹಲವು ಕುತೂಹಲಗಳನ್ನು ಸೃಷ್ಟಿಸಿದೆ. ಒಂದುವೇಳೆ ಸೀಟು ಹಂಚಿಕೆ ಮಾತುಕತೆಯಲ್ಲಿ ಜೆಡಿಎಸ್ ವರಿಷ್ಠರು ಕ್ಷೇತ್ರವನ್ನು ಬಿಜೆಪಿ ಅಭ್ಯರ್ಥಿಗೆ ಬಿಟ್ಟುಕೊಡಲು ಒಪ್ಪಿಗೆ ನೀಡಿದರೆ ಪಕ್ಷದ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಬೆಂಬಲ ನೀಡಲಿದ್ದಾರೆ, ಅಥವಾ ಕಾಂಗ್ರೆಸ್‌ಗೆ ಶಿಫ್ಟ್ ಆಗಲಿದ್ದಾರೆ ಎಂಬ ಚರ್ಚೆಗಳು ಮಂಡ್ಯಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಸೋತ
ಈ ವಿಡಿಯೋ ನೋಡಿ : ತೆರಿಗೆ ಹಂಚಿಕೆ ತಾರತಮ್ಯ : ಕೇಂದ್ರ ಸರ್ಕಾರದ ವಿರುದ್ಧ ಕೇರಳ ಸರ್ಕಾರದ ಪ್ರತಿಭಟನೆ