ಚನ್ನಪಟ್ಟಣ: ಮೂರು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಚುನಾವಣೆಯ ಬಳಿಕ ತೆರವಾಗಿದ್ದು,ಇದೀಗ ಉಪಚುನಾವಣೆ ಘೋಷಣೆಯಾಗಿದೆ. ಸದ್ಯ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ಇಡೀ ದೇಶದ ಗಮನ ಸೇಳೆಯುತ್ತಿದೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಿಜೆಪಿಯಲ್ಲಿದ್ದ ಸಿಪಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದು ಟಿಕೆಟ್ ಕೂಡ ನೀಡಿದೆ.
ಆ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಠಕ್ಕರ್ ಕೊಡುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ. ಇದೀಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಇದನ್ನು ಓದಿ : ಕಾಂಗ್ರೆಸ್ ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಸಿ.ಪಿ ಯೋಗೇಶ್ವರ್ ಭರ್ಜರಿ ರೋಡ್ ಶೋ
‘ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಿಖಿಲ್ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡುತ್ತೇನೆ’ ಎಂದು ದೇವೇಗೌಡ ನುಡಿದರು. ‘ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮೈತ್ರಿಕೂಟದ ಪರವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ’ ಎಂದು ಅವರು ಹೇಳಿದರು.
ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಯ ಕುರಿತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ರಾಜ್ಯ ನಾಯಕರ ಸಭೆ ಕರೆಯಲಾಗಿತ್ತು. ರಾಜ್ಯದಲ್ಲಿ ಎನ್‌ಡಿಎ ಮೈತ್ರಿ ಗಟ್ಟಿಯಾಗಿ ಉಳಿಯಬೇಕು ಹಾಗಾಗಿ ನಾವು ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ತೀರ್ಮಾನ ಮಾಡಿದ್ವಿ. ಆದರೆ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಇದಕ್ಕೆ ಚನ್ನಪಟ್ಟಣದ ಜನತೆ ಉತ್ತರ ನೀಡಬೇಕು ಎಂದು ಮನವಿ ಮಾಡಿದರು.
ಇದನ್ನು ನೋಡಿ : ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪ ಚುನಾವಣೆ: BJP JDS ಸಂಭಾವ್ಯ ಅಭ್ಯರ್ಥಿಗಳಾರು?