ಪಾಟ್ನ: ಬಿಹಾರ ರಾಜ್ಯದ ಮೋತಿಹಾರಿ ಜಿಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆಯೊಂದಲ್ಲಿ ಸ್ಫೋಟ ಸಂಭವಿಸಿದ್ದು, ಇದರ ಪರಿಣಾಮ 9 ಮಂದಿ ಕಾರ್ಮಿಕರು ಸಾವೀಗೀಡಾಗಿದ್ದಾರೆ ಮತ್ತು 8 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲೆಯ ರಾಮಗರ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಟ್ಟಿಗೆ ಗೂಡಿನ ಚಿಮಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಈ ಸ್ಫೋಟ ನಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ ಇಟ್ಟಿಗೆ ಕಾರ್ಖಾನೆ ಮಾಲೀಕ ಮೊಹಮ್ಮದ್ ಇಶ್ರಾರ್ ಕೂಡ ಸಾವೀಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಭಾರತೀಯ ಸೇನಾ ವಾಹನ ಕಣಿವೆಗೆ ಉರುಳಿ 16 ಯೋಧರು ಸಾವು
ದುರಂತದಲ್ಲಿ ಇದುವರೆಗೆ 9 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಘಟನೆಯನ್ನು ಸಿಲುಕಿರುವವರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಇದನ್ನು ಓದಿ: ವಿದ್ಯಾರ್ಥಿನೀಯರು ಅಸ್ವಸ್ಥ: ದೆವ್ವ ಹಿಡಿದಿದೆಯೆಂದು ತಾಂತ್ರಿಕ ಬಾಬಾನನ್ನು ಕರೆಸಿದ ಶಾಲಾ ಆಡಳಿತ ಮಂಡಳಿ!
ಮೋತಿಹಾರಿ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿರುವ ನಿತೀಶ್ ಕುಮಾರ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.