- ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಚರ್ಚೆಗೆ ಟ್ವಿಟರ್‍ನಲ್ಲಿ ಕಾಲೆಳೆದ ಬಿಜೆಪಿ ರಾಜ್ಯಾಧ್ಯಕ್ಷ
ಬೆಂಗಳೂರು: ಮದುವೆಯ ನಿಶ್ಚಿತಾರ್ಥಕ್ಕೆ ಇನ್ನೂ ವಧು ಹುಡುಕಿಲ್ಲ, ಆಗಲೇ ಮಗುವಿನ ನಾಮಕರಣಕ್ಕೆ ತಯಾರಿ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಚರ್ಚೆಗೆ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಚರ್ಚೆ ತೀವ್ರಗೊಳ್ಳುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಹಗ್ಗಜಗ್ಗಾಟ ಆರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್ ವ್ಯಂಗ್ಯದ ಮೂಲಕ ಟಾಂಗ್ ಕೊಟ್ಟಿದ್ದಾರೆ.
ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ವರ್ಷಕ್ಕೂ ಅಧಿಕ ಸಮಯವಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಈಗಲೇ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭಗೊಂಡಿದೆನಿಶ್ಚಿತಾರ್ಥಕ್ಕೆ ವಧು ಹುಡುಕಿಲ್ಲ. ಆಗಲೇ ಮಗುವಿನ ನಾಮಕರಣಕ್ಕೆ ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್‌ಗೆ ಅಧಿಕಾರ ದಕ್ಕಿಲ್ಲ. ಒಂದು ವೇಳೆ ಅಧಿಕಾರ ಹತ್ತಿರ ಬಂದರೆ ಕಾಂಗ್ರೆಸ್ ಪರಿಸ್ಥಿತಿ ಏನಾಗಬಹುದು? ಎಂದು ಪ್ರಶ್ನಿಸಿರುವ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ಪಕ್ಷದ ನಾಟಕಗಳನ್ನು ಜನರು ಗಮನಿಸುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಕಾಲೆಳೆದಿದ್ದಾರೆ.
ಕಾಂಗ್ರೆಸ್‌ನಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿ ಯಾರು ಎಂಬ ಚರ್ಚೆ ತೀವ್ರಗೊಂಡಿದೆ. ಪಕ್ಷದಲ್ಲಿ ಎರಡು ಬಣಗಳು ಸೃಷ್ಟಿಯಾಗಿದ್ದು ಸಿದ್ದರಾಮಯ್ಯ ಪರವಾಗಿ ಒಂದು ಬಣ ವಾದ ಮಾಡುತ್ತಿದ್ದರೆ ಡಿಕೆ ಶಿವಕುಮಾರ್ ಪರವಾಗಿ ಮತ್ತೊಂದು ಬಣ ವಾದ ಮಾಡುತ್ತಿದೆ.