ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್ ಸವಾರರಿಗೆ ನೋ ಎಂಟ್ರಿ!

ಬೆಂಗಳೂರು: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ದ್ವಿಚಕ್ರ ವಾಹನಗಳ ಪ್ರವೇಶವನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಷೇಧಿಸಿದೆ. ಮಾ.2ರಂದು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಸಂಭವಿಸಿದ ಮೊದಲ ಅಪಘಾತದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಪ್ರವೇಶ ಮತ್ತು ನಿರ್ಗಮನ ದ್ವಾರಗಳ ಬಳಿ ಬೈಕ್‌ಗಳ ಪ್ರವೇಶವನ್ನು ನಿಷೇಧಿಸಲು ಗಸ್ತು ವಾಹನಗಳಿಗೆ ಸೂಚನೆ ನೀಡಲಾಗಿದೆ. ಎಕ್ಸ್‌ಪ್ರೆಸ್‌ವೇನಲ್ಲಿ ಬೈಕ್‌ಗಳ ಬಳಕೆಯನ್ನು ನಿಷೇಧಿಸಲು ಸೈನ್‌ಬೋರ್ಡ್‌ಗಳ ಅಳವಡಿಕೆ ಕಾರ್ಯ ಶೀಘ್ರ ಆರಂಭವಾಗಲಿದೆ.

ಇದನ್ನು ಓದಿ :ಕುಡಿದು ಕಿರುಕುಳ ನೀಡಿದ ಆರೋಪ: ಚಾಲಕನ ಮೇಲೆ ಹಲ್ಲೆ ನಡೆಸಿದ ಅಸ್ಸಾಂ ಮಾಜಿ ಸಿಎಂ ಮಗಳು, ವಿಡಿಯೋ ವೈರಲ್

ದೇಶದ ಯಾವುದೇ ಎಕ್ಸ್‌ಪ್ರೆಸ್‌ವೇಗಳಲ್ಲೂ ಬೈಕ್ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ದ್ವಿಚಕ್ರ ವಾಹನ ಸವಾರರು ಈ ಎಕ್ಸ್‌ಪ್ರೆಸ್‌ವೇ ಬಳಸದಂತೆ ನಾವು ಒತ್ತಾಯಿಸುತ್ತೇವೆ. ಎಕ್ಸ್‌ಪ್ರೆಸ್‌ವೇಗಳನ್ನು ಗರಿಷ್ಠ 120 ಕಿ.ಮೀ ವೇಗದಲ್ಲಿ ಚಾಲನೆ ಮಾಡಲು ವಿನ್ಯಾಸಗೊಳಿಸಲಾಗಿದೆ. ಇತರ ವಾಹನಗಳು ಹೆಚ್ಚಿನ ವೇಗದಲ್ಲಿ ಚಲಿಸುವಾಗ ಬೈಕ್ ಸವಾರರು ಈ ಮಾರ್ಗವನ್ನು ಬಳಸುವುದು ಸುರಕ್ಷಿತವಲ್ಲ. ಬೈಕ್ ಸವಾರರು ತಮ್ಮ ಜೀವ ಮತ್ತು ಇತರ ವಾಹನ ಸವಾರರನ್ನೂ ಅಪಾಯಕ್ಕೆ ಸಿಲುಕಿಸುತ್ತಾರೆ. ಈ ರಸ್ತೆ ಪೂರ್ಣಗೊಂಡಾಗ ವಾಹನ ಚಾಲಕರಿಗೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೆವು. ಅನೇಕ ಬೈಕ್ ಸವಾರರು ಹೊಸ ಅನುಭವಕ್ಕಾಗಿ ಈ ಹೈವೇಗೆ ಬಂದಿದ್ದರು. ಜೀವಗಳು ಅಮೂಲ್ಯವಾಗಿರುವುದರಿಂದ ಬೈಕ್ ಸವಾರರು ಈ ರಸ್ತೆಯಲ್ಲಿ ಸಂಚಾರ ಮಾಡಬಾರದು ಎಂದು ಎನ್‌ಹೆಚ್‌ಎಐ ತಿಳಿಸಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ 68 ಕಿ.ಮೀ. ಮಾರ್ಗವನ್ನು ಕಳೆದ ತಿಂಗಳು ತಾತ್ಕಾಲಿಕವಾಗಿ ವಾಹನ ಸಂಚಾರಕ್ಕಾಗಿ ತೆರೆಯಲಾಯಿತು. ಕರ್ನಾಟಕದಲ್ಲಿ 71 ಕಿ.ಮೀ. ಎಕ್ಸ್‌ಪ್ರೆಸ್‌ವೇ ಮಾರ್ಗದ ನಿರ್ಮಾಣವನ್ನು ಎನ್‌ಹೆಚ್‌ಎಐ ಪೂರ್ಣಗೊಳಿಸಿದೆ. ಹೊಸಕೋಟೆಯಿಂದ ಚೆನ್ನೈ ಬಳಿಯ ಶ್ರೀಪೆರಂಬುದೂರಿನವರೆಗಿನ 260 ಕಿ.ಮೀ. ಭಾಗವು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ವ್ಯಾಪ್ತಿಗೆ ಬರುತ್ತದೆ. ಅದು ಈ ವರ್ಷಾಂತ್ಯದ ವೇಳೆಗೆ ತೆರೆಯುವ ಸಾಧ್ಯತೆಯಿದೆ. ಕರ್ನಾಟಕದ ಮಿತಿಯೊಳಗೆ, ಈ ಎಕ್ಸ್‌ಪ್ರೆಸ್‌ವೇ ಮೂಲಕ ಜನರು ಹೊಸಕೋಟೆ, ಮಾಲೂರು, ಕೆಜಿಎಫ್ ಮತ್ತು ಇತರ ಸ್ಥಳಗಳನ್ನು ತಲುಪಲು ಸಹಾಯ ಮಾಡುತ್ತದೆ.

ಇದನ್ನು ಓದಿ :ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ

 

Donate Janashakthi Media

Leave a Reply

Your email address will not be published. Required fields are marked *