ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ಮುಂದಿನ ವರ್ಷದಿಂದ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಭೆ ಬಳಿಕ ಮಾತನಾಡಿದ ಮಧುಬಂಗಾರಪ್ಪ ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆಯಲ್ಲಿ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರಿಂದ ವಿರೋಧ ಬಂದಿರುವುದರಿಂದ ಸಿಎಂ ಇದಕ್ಕೆ ನಕಾರ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ಕತ್ತು ಕೊಯ್ದು ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ
ಈ ವರ್ಷ ಕೊಟ್ಟಿರುವ ಗ್ರೇಸ್ ಮಾರ್ಕ್ಸ್‌ನಲ್ಲಿ ಯಾವುದೂ ಬದಲಾವಣೆ ಇಲ್ಲ. ಮುಂದಿನ ವರ್ಷದಿಂದ 20% ಗ್ರೇಸ್ ಮಾರ್ಕ್ಸ್ ಕೊಡುವ ಪದ್ಧತಿ ಇರಲ್ಲ. ಇನ್ನು ಮುಂದೆ ಹಿಂದಿನ ಪದ್ಧತಿಯೇ ಮುಂದುವರಿಯಲಿದೆ ಎಂದರು.
ಪರೀಕ್ಷಾ ನಡವಳಿಕೆ ಸರಿ ಮಾಡಲು ಮುಂದಾಗಿದ್ದೆವು. ಈ ವರ್ಷ ಮಾತ್ರ ಗ್ರೇಸ್ ಮಾರ್ಕ್ಸ್ ಕೊಡುವ ತೀರ್ಮಾನ ಮಾಡಲಾಗಿತ್ತು. ಯಾವಾಗಲೂ 5% ಗ್ರೇಸ್ ಅಂಕ ಇರುತಿತ್ತು. ಕೋವಿಡ್ ವೇಳೆ 10% ಮಾಡಲಾಗಿತ್ತು. ಇದೀಗ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ ಪಾಸಾಗುವಂತೆ ಮಾಡಲು 20% ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದು ಈ ವರ್ಷಕ್ಕೆ ಯಾವ ಸಮಸ್ಯೆ ಇಲ್ಲ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದರು.
ಇದನ್ನು ನೋಡಿ : ಮಂಗಳ ಸೂತ್ರ ಮತ್ತು ಮತ ರಾಜಕಾರಣ – ಡಾ. ಮೀನಾಕ್ಷಿ ಬಾಳಿ, ಕೆಎಸ್ ವಿಮಲಾ ಮಾತುಕತೆ Janashakthi Media