ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕ ಬೇಡ: ಹೈಕೋರ್ಟ್

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ ಎಂಬುದಾಗಿ ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ರಿದ್ದ ಪೀಠವು ಮಧ್ಯಂತರ ಆದೇಶ ಮಾಡಿದೆ.

ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯ್ತಿ, ನರಸಿಂಹರಾಜಪುರ ಪಟ್ಟಣ ಪಂಚಾಯ್ತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ ನರಸೀಪುರ ಪುರಸಭೆ, ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಧರ್ಮಸ್ಥಳ| ಬಾಲಕಿ ಕಾಣೆಯಾಗಿ 13 ವರ್ಷಗಳ ನಂತರ ದೂರನ್ನು ಸ್ವೀಕರಿಸಿದ ಪೊಲೀಸರು

ಸದಸ್ಯರ ಅವಧಿಯಿಂದ ಎಒ ನೇಕವಾಗಿದ್ದ ಅವಧಿ ಹೊರತುಪಡಿಸಲು ಕೋರಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡವೆಂದು ಆದೇಶಿಸಿದೆ.

ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಸೂಚಿಸಿದೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಲಾಗಿದೆ.

ಇದನ್ನೂ ನೋಡಿ: ನಿರಂಜನ ಶತಮಾನೋತ್ಸವ ಸಮಾರೋಪ | ಕನ್ನಡ ಸಾಹಿತ್ಯಕ್ಕೆ ಕ್ಲಾಸಿಕ್ ಕೃತಿಗಳನ್ನು ನೀಡಿದ ನಿರಂಜನJanashakthi Media

Donate Janashakthi Media

Leave a Reply

Your email address will not be published. Required fields are marked *