ಬಳ್ಳಾರಿ ಬ್ಯಾನರ್‌ ವಿವಾದ: ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ – ಜಿ. ಪರಮೇಶ್ವರ್

ಬೆಂಗಳೂರು: ಬಳ್ಳಾರಿ ಗುಂಪು ಘರ್ಷಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.

ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಈಗಾಗಲೇ ಕ್ಯಾಬಿನೆಟ್ ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು.

ಇದನ್ನೂ ಓದಿ: ಪುಣೆ | ಖ್ಯಾತ ಪರಿಸರ ತಜ್ಞ ಮಾಧವ ಗಾಡ್ಗೀಳ್ ನಿಧನ

ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದರು.

ಹುಬ್ಬಳ್ಳಿ ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ ಎಂದರು.

ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ ಎಂದು ಪರಮೇಶ್ವರ್ ಹೇಳಿದರು.

ಯಾವ ಪಕ್ಷದವನ್ನು ಅವರ ರಾಜಕೀಯ ಪಕ್ಷದ ಹಿನ್ನೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಅಕ್ರಮ ಬಾಂಗ್ಲಾ ವಲಸಿಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರು ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ನೋಡಿ: ಮರ್ಯಾದೆಗೇಡು ಹತ್ಯೆ ನಿಷೇಧ ಕಾಯ್ದೆಗಾಗಿ ಪತ್ರ ಚಳವಳಿ Janashakthi Media

Donate Janashakthi Media

Leave a Reply

Your email address will not be published. Required fields are marked *