ಬೆಂಗಳೂರು ಮಳೆ: ಆತಂಕಪಡುವ ಅಗತ್ಯವಿಲ್ಲ; ರಕ್ಷಣೆಗೆ ಸರ್ಕಾರ ಬದ್ಧ – ಡಿ.ಕೆ.ಶಿವಕುಮಾರ್

ಬೆಂಗಳೂರು: ನಗರದಲ್ಲಿ ಭಾರಿ ಮಳೆಯ ಆರ್ಭಟಕ್ಕೆ ಜನಜೀವನ ಅಲ್ಲೋಲಕಲ್ಲೋಲವಾಗಿದ್ದೂ, ಸಾವು-ನೋವುಗಳು ಸಂಭವಿಸುತ್ತಿವೆ. ನಿರಂತರವಾಗಿ ಸುರುಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ. ಜನರ ಜೀವ, ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಆಪರೇಷನ್‌ ಸಿಂಧೂರ: ಜಮ್ಮು ಪ್ರದೇಶದ ಗಡಿ ಭಾಗದ ಶಾಲೆಗಳ ಪುನರಾರಂಭ

ಮಳೆ ಅವಾಂತರದಿಂದ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳ ಜೊತೆ ಚರ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ, ಎಲ್ಲಾ ಶಾಸಕರೊಂದಿಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ ಖುದ್ದು ಮುಖ್ಯಮಂತ್ರಿಗಳು ಅದಿಕಾರಿಗಳು, ಶಾಸಕರೊಂದಿಗೆ ತೆರಳಿ ಪರಿಶೀಲನೆ ಕೈಗೊಳ್ಳಲಿದ್ದಾರೆ. ಜನರು ಅತಂಕಪಡುವ ಅಗತ್ಯವಿಲ್ಲ. ಜನರ ಹಾಗೂ ಜನರ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.

ಇದನ್ನೂ ನೋಡಿ: ಪಹಲ್ಗಾಮ ಹತ್ಯೆ ಮತ್ತು ಸೇನಾ ಸಂಘರ್ಷ‌, ಯುದ್ಧೋನ್ಮಾದ ಮತ್ತು ಉನ್ಮಾದ ರಾಷ್ಟ್ರೀಯತೆ…Janashakthi Media

Donate Janashakthi Media

Leave a Reply

Your email address will not be published. Required fields are marked *