ನವದೆಹಲಿ: ಮುಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದೆ ಹೊರತಾಗಿಯೂ, ಸಿಎಂ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಿದೆ.
ಪ್ರಕರಣ ಸಂಬಂಧ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿರುವ ಪಕ್ಷದ ಕೇಂದ್ರ ನಾಯಕತ್ವ, ಈ ಪ್ರಕರಣವನ್ನು ರಾಜಕೀಯವಾಗಿ ಮತ್ತು ಕಾನೂನು ಮಾರ್ಗದ ಮೂಲಕ ಎದುರಿಸುವುದಾಗಿ ಘೋಷಿಸಿದೆ.
ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗೆ ಗನ್ ತೋರಿಸಿ ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ: ಉತ್ತರ ಪ್ರದೇಶದಲ್ಲಿ ಘಟನೆ
ಈ ಕುರಿತು ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ‘ಮೋದಿ- ಅಮಿಶಾ ಆಡಳಿತದಲ್ಲಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡುತ್ತಿರುವುದು ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಬಗ್ಗೆ ಭಾರೀ ಕಳವಳ ಹುಟ್ಟುವಂತೆ ಮಾಡಿದೆ ಎಂದಿದ್ದಾರೆ.
ಇದನ್ನೂ ನೋಡಿ: ಬಿಟ್ ಕಾಯಿನ್, ಪಿಎಸ್‌ಐ ನೇಮಕ ಸಮಗ್ರ ತನಿಖೆಗೆ ಆಗ್ರಹ – ಕಿಮ್ಮನೆ ರತ್ನಾಕರJanashakthi Media