ಕೋಲಾರ: ಮಂಡ್ಯ ಸೇರಿದಂತೆ ರಾಜ್ಯದ ಯಾವುದೇ ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಸೀಟು ಕುರಿತು ಬಿಜೆಪಿಯೊಂದಿಗೆ ಮಾತುಕತೆ ಆಗಿಲ್ಲ. ಬಿಜೆಪಿ ವರಿಷ್ಠರೊಂದಿಗೆ ಪರಸ್ಪರ ಮಾತಿನ ಮೂಲಕ ಎಲ್ಲವನ್ನು ತೀರ್ಮಾನ ಕೈಗೊಳ್ಳುತ್ತೇವೆ ಎಂದು ನಗರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಮ್ಮ ಮೊದಲ ಆದ್ಯತೆ ಜಿಲ್ಲಾ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಕಡೆ ಗಮನ ನೀಡುವುದಾಗಿದೆ ಎಂದು ಸ್ಪಷ್ಟಪಡಿಸಿದರು. ವಿಧಾನಸಭಾ
ಇದನ್ನೂ ಓದಿ: ತಿರುನೆಲ್ವೇಲಿ| ಭೂಕಬಳಿಕೆ ಮತ್ತು ನಕಲಿ ಪಟ್ಟಾಗಳ ವಿರುದ್ಧ ರೈತರ ಹೋರಾಟ
ಕೋಲಾರಕ್ಕೆ ಕೃಷ್ಣ ನೀರು, ಆಂಧ್ರ ಸಿಎಂ ಭೇಟಿಗೆ ನಿರ್ಧಾರ:
ಕೃಷ್ಣ ನದಿ ನೀರನ್ನು ಕೋಲಾರ ಜಿಲ್ಲೆಗೆ ಹರಿಸುವ ಕುರಿತು ಕೋಲಾರ ಸಂಸದ ಮಲ್ಲೇಶ್ ಬಾಬು ಕೇಂದ್ರ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಈ ಸಂಬಂಧ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡುತ್ತೇನೆ. ಆಂಧ್ರ ಜನರ ಭಾವನೆಗಳಿಗೆ ಧಕ್ಕೆ ತರದೆ ಅವರ ಸಹಕಾರ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಕೇಂದ್ರ ಸರ್ಕಾರದ ಕೆಲಸಗಳಿಗೆ ಸಂಬಂಧಿಸಿ ಇದುವರೆಗೂ ಮುಖ್ಯಮಂತ್ರಿಗಳು ನಮ್ಮನ್ನು ಭೇಟಿ ಆಗಿಲ್ಲ, ನಮ್ಮ ಪ್ರಯತ್ನದಿಂದ ಮೊದಲ ಬಾರಿಗೆ ಕೇಂದ್ರ ಸರ್ಕಾರ ಮಾವಿಗೆ ಬೆಂಬಲ ಬೆಲೆ ನೀಡಿತ್ತು ಎಂದರು. ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಕಾರ್ಯಕ್ರಮ ಎಂದು ಅದರ ಶಂಕುಸ್ಥಾಪನೆ ದಿನವೇ ಹೇಳಿದ್ದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ನೀರು ಕೊಡಲು ಈ ಸರ್ಕಾರಕ್ಕೆ ಇನ್ನು ಎಷ್ಟು ದಿನ ಬೇಕು ಎಂದು ಪ್ರಶ್ನಿಸಿದರು.
ಇದನ್ನೂ ನೋಡಿ: ಫೆ12ರ ಮುಷ್ಕರ | ಕೃಷಿ ರೈತರದ್ದು, ಕಾರ್ಪರೇಟ್ ಕಂಪನಿಗಳದ್ದು ಅಲ್ಲ | ಸಿದ್ಧನಗೌಡ ಪಾಟೀಲ್ | ಗುರುರಾಜ ದೇಸಾಯಿ
