ಭಾರತದ ಜೊತೆ ಯುದ್ಧ ಬೇಡ: ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್

ಹಲ್ಗಾಮ್: ಪ್ರವಾಸಿಗರ ಮೇಲೆ ಉಗ್ರರು ಭೀಕರವಾದ ಗುಂಡಿನ ದಾಳಿ ನಡೆಸಿ 26 ಜನರನ್ನು ಬಲಿ ಪಡೆದಿರುವ ಈ ಒಂದು ಘಟನೆ ಖಂಡಿಸಿ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದ್ದು ಅಲ್ಲದೆ ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿವೆ.

ಇದೀಗ ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜೊತೆ ಯುದ್ಧ ಬೇಡವೆಂದು ಪಾಕಿಸ್ತಾನದ ಸರ್ಕಾರಕ್ಕೆ ಮಾಜಿ ಪ್ರಧಾನಿ ನವಾಜ್ ಶರೀಫ್ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ಈ ಕುರಿತು ಹಾಲಿ ಪ್ರಧಾನ ಮಂತ್ರಿ ಶಾಬಾದ್ ಶರೀಫ ರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ ಹೈಕೋರ್ಟ್‌ನ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವಾಜ್ ಶರೀಫ್ ಗೆ ಕರೆ ಮಾಡಿ ಸದ್ಯದ ಪರಿಸ್ಥಿತಿ ಬಗ್ಗೆ ಶಹಾಬಾಜ್ ಶರೀಫ್ ವಿವರಿಸಿದ್ದರು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಜೊತೆಗೆ ಯುದ್ಧ ಬೇಡವೆಂದು ನವಾಜ್ ಶರೀಫ್ ಶಹಬಾದ್ ಶರೀಫ್ ಗೆ ನೀಡಿದ್ದಾರೆ.

ರಾಜ ತಾಂತ್ರಿಕ ಚರ್ಚೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಶಹಾಬಾಜ್ ಶರೀಫಗೆ ಹಾಗು ಪಾಕಿಸ್ತಾನ ಸರಕಾರಕ್ಕೆ ಮಾಜಿ ಪ್ರಧಾನಮಂತ್ರಿ ನವಾಜ್ ಶರೀಫ್ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ನೋಡಿ: ಶಾಂತಿ ಸ್ಥಾಪಿಸುವ ಬದಲು ಪ್ರಚೋದಿಸುತ್ತಿರುವ ಗೋಧಿ ಮೀಡಿಯಾ ಬಗ್ಗೆ ಕಾಶ್ಮೀರಿ ಜನರ ಆಕ್ರೋಶ Janashakthi Media

Donate Janashakthi Media

Leave a Reply

Your email address will not be published. Required fields are marked *