ಗುರುಗ್ರಾಮ:ನುಹ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಆರೋಪಿಯನ್ನು ಅಮೀರ್ ಎಂದು ಗುರುತಿಸಲಾಗಿದೆ. ಅಮೀರ್‌ನನ್ನು ಅರಾವಳಿ ಬೆಟ್ಟಗಳ ತಪ್ಪಲಿನಲ್ಲಿರುವ ತೌರು ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಹರಿಯಾಣ ಹಿಂಸಾಚಾರ: 44 ಎಫ್‌ಐಆರ್‌ಗಳು ಮತ್ತು 139 ಬಂಧನ
ಪೊಲೀಸರು ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಅಮೀರ್ ಹಾಗೂ ಆತನ ಸಹಚರರು ಅಡಗಿದ್ದ ಸ್ಥಳದ ಮೇಲೆ ದಾಳಿ ಮಾಡಿದ್ದರು. ಈ ವೇಳೆ ಅಮೀರ್ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದ, ಪೊಲೀಸರು ಅಮೀರ್ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಅಮೀರ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಜುಲೈ 31ರಂದು ವಿಶ್ವ ಹಿಂದೂ ಪರಿಷತ್ತಿನ ಮೆರವಣಿಗಿ ಸಂದರ್ಭದಲ್ಲಿ ಪ್ರಾರಂಭವಾದ ಕೋಮುಗಲಭೆ ತೀವ್ರ ಹಿಂಸಾಚಾರ ತಿರುಗಿತ್ತು. ಇದು ಪಕ್ಕದ ಗುರುಗ್ರಾಮ ಜಿಲ್ಲೆಗೂ ವ್ಯಾಪಿಸಿತ್ತು,ಘಟನೆಯಲ್ಲಿ ಕನಿಷ್ಠ 6ಜನ ಸಾವಿಗೀಡಾಗಿ 70ಕ್ಕೂ ಅಧಿಕ ಜನ ಗಾಯಗೊಂಡಿದ್ದರು.