ಸ್ಟಾಕ್‌ಹೋಮ್ | ಜಾನ್ ಕ್ಲಾರ್ಕ್ ಸೇರಿದಂತೆ ಮೂವರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ ಘೋಷಣೆ

Please follow and like us:
ಸ್ಟಾಕ್‌ಹೋಮ್: ಜಾನ್ ಕ್ಲಾರ್ಕ್, ಮೈಕೆಲ್ ಎಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ಎಂಬ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಸ್ಟಾಕ್‌ಹೋಮ್

ಇದನ್ನೂ ಓದಿ : ಭವಿಷ್ಯದ ಅನಿಶ್ಚಿತತೆಯೂ ಯುವಜಗತ್ತಿನ ಆತಂಕವೂ

ನೊಬೆಲ್ ಪ್ರಶಸ್ತಿಯ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಪುಣ್ಯತಿಥಿಯಾದ ಡಿಸೆಂಬರ್ 10ರಂದು ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ.  ಕಳೆದ ವರ್ಷ ಜಾನ್ ಹಾಪ್‌ಫೀಲ್ಡ್ ಮತ್ತು ಜೆಫ್ರಿ ಹಿಂಟರ್ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಜಯಿಸಿದ್ದರು.

ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಂಬಂಧಿಸಿದ ಸಂಶೋಧನೆಗಾಗಿ ವಿಜ್ಞಾನಿಗಳಾದ ಅಮೆರಿಕದ ಮೇರಿ ಈ.ಬ್ರಂಕೊ, ಫ್ರೆಡ್ ರಾಮ್ಸ್‌ಡೆಲ್ ಹಾಗೂ ಜಪಾನ್‌ನ ಶಿಮೋನ್ ಸಕಾಗುಚಿ ಅವರು 2025ನೇ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದರು.

ನಾಳೆ (ಬುಧವಾರ) ರಸಾಯನಶಾಸ್ತ್ರ ಹಾಗೂ ಗುರುವಾರ ಸಾಹಿತ್ಯ ವಿಭಾಗದ ನೊಬೆಲ್ ಪ್ರಶಸ್ತಿಗಳ ಘೋಷಣೆಯಾಗಲಿದೆ. ಶುಕ್ರವಾರದಂದು ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಲಿದೆ. ಹಾಗೆಯೇ ಅಕ್ಟೋಬರ್ 13ರಂದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಪ್ರಕಟವಾಗಲಿದೆ.

ಇದನ್ನೂ ನೋಡಿ : ನಾಟಕ | “ಪ್ಲಾಸ್ಟಿಕ್‌ ಅಸುರ” Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *