ಬೆಂಗಳೂರು:ಪೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮಾಜಿ ಸಿಎಂ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪಗೆ ಜಾಮೀನುರಹಿತ ವಾರೆಂಟ್ ಜಾರಿಯಾಗಿದೆ.
ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
ಇದನ್ನು ಓದಿ : ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ
ಪೋಕ್ಸೋ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿತ್ತು. ಆದರೆ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆ ಎದುರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈಗೆ ಬಂಧನ ಭೀತಿ ಎದುರಾಗಿದೆ.
ಯಾವುದೇ ಕ್ಷಣದಲ್ಲೀ ಬಿಎಸ್ ವೈ ಬಂಧನ ಸಾಧ್ಯತೆ ಇದೆ. ಪೋಕ್ಸೋ ಕಾಯಿದೆಯಡಿ ಸಂತ್ರಸ್ತೆಯ ಸಹೋದರ ಬಿಎಸ್ವೈ ವಿರುದ್ಧ ದೂರು ದಾಖಲಿಸಿದ್ದು, ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಇದನ್ನು ನೋಡಿ : ಮಾರ್ಕ್ಸ್‌ವಾದ ಮತ್ತು ಅದರ ಆಧಾರಿತ ಚಳುವಳಿಗಳ ಕೊಲೆಗೆ ನಿರಂತರವಾಗಿ ಹಲವು ಪ್ರಯತ್ನಗಳು” ನಡೆದಿವೆ Janashakthi Media