ಜಾಮೀನು ರಹಿತ ವಾರೆಂಟ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ ಸಾಧ್ಯತೆ

ಸ್ಲಾಮಾಬಾದ್‌: ತೋಶಖಾನಾದ ಅಮೂಲ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಿ ಬಳಿಕ ಲಾಭ ಗಳಿಸಲು ಮಾರಾಟ ಮಾಡಿದ ಹಾಗೂ ಮಹಿಳಾ ನ್ಯಾಯಾಧೀಶರೊಬ್ಬರಿಗೆ ಬೆದರಿಕೆ ಹಾಕಿದ ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ಹಾಗೂ ತೆಹರೀಕ್‌ ಇ-ಇನ್ಸಾಫ್‌ (ಪಿಟಿಐ) ಪಕ್ಷದ ನಾಯಕ ಇಮ್ರಾನ್‌ ಖಾನ್‌ ಅವರನ್ನು ಇಂದು ಬಂಧಿಸುವ ಸಾಧ್ಯತೆ ಇದೆ ಎಂದು  ಅಲ್ಲಿಯ ಸ್ಥಳೀಯ ಮಾಧ್ಯಮಗಳು ಮಾಹಿತಿ ನೀಡಿವೆ.

 ಪಾಕಿಸ್ತಾನದ ಎರಡು ನ್ಯಾಯಾಲಯಗಳು ಮಾಜಿ ಪ್ರಧಾನಿ ಇಮ್ರಾನ್ ಖಾನ್‌ ಅವರಿಗೆ ಸೋಮವಾರ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿವೆ. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಮ್ರಾನ್‌ ಖಾನ್‌ ಅವರು ಸೋಮವಾರ ನ್ಯಾಯಾಲಯಗಳ ಮುಂದೆ ಹಾಜರಾಗಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆಯಲ್ಲಿ ಇದೇ 18 ಮತ್ತು 21ರಂದು ತಮ್ಮ ಮುಂದೆ ಹಾಜರುಪಡಿಸಬೇಕು ಎಂದು ಇಬ್ಬರು ಜಿಲ್ಲಾ ನ್ಯಾಯಾಧೀಶರು ಪೊಲೀಸರಿಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ : ಅರಾಜಕತೆ ಸೃಷ್ಟಿಸೋದು ನನಗಿಷ್ಟವಿಲ್ಲ: ಪ್ರತಿಭಟನಾ ರ‍್ಯಾಲಿ ಕೈಬಿಟ್ಟ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್‌ ಪೊಲೀಸರು ಇಂದು ಅವರನ್ನು ಬಂಧಿಸಲಿದ್ದಾರೆ. ಇದಕ್ಕಾಗಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಜಿಯೊ ನ್ಯೂಸ್‌ ವರದಿ ಮಾಡಿದೆ.

Donate Janashakthi Media

Leave a Reply

Your email address will not be published. Required fields are marked *