ನಿವೃತ್ತಿ ವರೆಗೆ ಸೇವಾ ಭದ್ರತೆ, ಬಾಕಿ ಸಂಬಳ, ನೇರವಾಗಿ ಇಲಾಖೆಯಿಂದ ವೇತನ, ಕನಿಷ್ಟ ವೇತನ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದಿಂದ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ (ZP) ಕಛೇರಿಯ ಮುಂದೆ, ಜೂನ್ 20ರಂದು ಪ್ರತಿಭಟನೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಒಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ:ಮಾ.10ರಿಂದ ವಸತಿಶಾಲಾ ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ
ಇದರ ಅಂಗವಾಗಿ ಕೊಪ್ಪಳದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ, , ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಉತ್ತರ ಕನ್ನಡದಲ್ಲಿ ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ. ಹಾಗೆಯೇ ಕಲಬುರಗಿ, ವಿಜಯನಗರ, ಬಳ್ಳಾರಿ, ಬೆಳಗಾವಿ, ಚಿಕ್ಕಬಳ್ಳಾಪುರ, ರಾಯಚೂರು, ಚಿಕ್ಕಮಗಳೂರು, ಮಂಡ್ಯ, ಬೀದರ್, ವಿಜಯಪುರ, ಚಾಮರಾಜನಗರ, ದಾವಣಗೆರೆ, ಗದಗ, ಹಾಸನ, ಹಾವೇರಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಸರ್ಕಾರ ನಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸದೇ ಹೋದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯ ಗೌರವ ಅಧ್ಯಕ್ಷ ನಿತ್ಯಾನಂದ ಸ್ವಾಮಿ, ಅಧ್ಯಕ್ಷ ಭೀಮಶೆಟ್ಟಿ ಯಂಪ್ಪಳ್ಳಿ. ಕಾರ್ಯದರ್ಶಿ ಕೆ.ಹನುಮೇಗೌಡ ತಿಳಿಸಿದ್ದಾರೆ.