ತಜ್ಞರ ವರದಿ ಆಧರಿಸಿ 1 ರಿಂದ 5ನೇ ತರಗತಿ ಆರಂಭ : ಎಸ್‌.ಸುರೇಶ್‌ ಕುಮಾರ್‌

ಹುಬ್ಬಳ್ಳಿ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಣಾಮ , 1 ರಿಂದ 5ನೇ ತರಗತಿವರೆಗಿನ ತರಗತಿ ಆರಂಭ ಸದ್ಯಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್‌ ಕುಮಾರ್‌ ರವರು ಸುದ್ದಿಗಾರರಿಗೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್‌ ಕುಮಾರ್‌ ರವರು ʻʻಮಾ.01ರಿಂದ ಶಾಲೆಗಳು ಆರಂಭವಾಗುವುದೆಂದು ನಿರೀಕ್ಷಿಸಲಾಗಿತ್ತು. ಅಲ್ಲದೆ ಶಾಲೆಯನ್ನು ಆರಂಭಿಸಬೇಕೆಂಬ ಬೇಡಿಕೆಯೂ ಹೆಚ್ಚಾಗುತ್ತಿದೆ. ಆದರೆ ಕಳೆದ ಕೆಲವು ದಿನಗಳಿಂದ ದೇಶದ ಐದು ಪ್ರಮುಖ ರಾಜ್ಯಗಳಲ್ಲಿ ಕೋವಿಡ್-19‌ ಪ್ರಕರಣಗಳು ಹೆಚ್ಚಾಗುತ್ತಿದೆ. ನೆರೆಯ ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ಉಲ್ಬಣಗೊಳ್ಳುತ್ತಿದೆʼʼ ಎಂದು ಹೇಳಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಆರೋಗ್ಯವ ಮುಖ್ಯವಾಗಿದೆ. ಇನ್ನೊಂದು ವಾರದಲ್ಲಿ ತಜ್ಞರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್‌ ಕುಮಾರ್‌ ರವರು ಹೇಳಿದರು.

ಈಗಾಗಲೇ ಶಾಲೆ ಆರಂಭ ಮಾಡಿರುವ ಬಗ್ಗೆ ನಿರ್ದಿಷ್ಟವಾಗಿ ದೂರು ಬಂದರೆ ಅವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ದೇಶದಲ್ಲಿ ಜಾರಿಗೊಂಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ. ಈ ಕುರಿತು ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್‌ ರವರ ನೇತೃತ್ವದ ಸಮಿತಿಯು ವರದಿಯನ್ನು ಸಲ್ಲಿಸಿದ್ದು ಅದರ ಅಧ್ಯಯನ ಮಾಡಲಾಗುತ್ತಿದೆ ಎಂದು ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *