ಬೆಂಗಳೂರು ಮೆಟ್ರೋ ರೈಲಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಕೇಸ್‌

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ವ್ಯಕ್ತಿಯೊಬ್ಬ  ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದು, ಮೆಟ್ರೋ ನಿಲ್ದಾಣದ ಭದ್ರತಾ ಸಿಬ್ಬಂದಿಯು ಆರೋಪಿಯನ್ನು ಹಿಡಿದು ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಜ.1ರಂದು ಮೆಜೆಸ್ಟಿಕ್‌ನ ಮೆಟ್ರೋ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ಮೆಟ್ರೋ ರೈಲು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಭದ್ರತಾ ಸಿಬ್ಬಂದಿ ಆ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆ ವ್ಯಕ್ತಿ ಪೊಲೀಸರ ಬಳಿ ತನ್ನ ತಪ್ಪೊಪ್ಪಿಕೊಂಡಿದ್ದು, ಮುಂದೆ ಹೀಗೆ ನಡೆದುಕೊಳ್ಳುವುದಿಲ್ಲ ಎಂದು ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಬೆಂಗಳೂರು

ಇದನ್ನೂ ಓದಿ2023 ಪತ್ರಕರ್ತರಿಗೆ ಅತ್ಯಂತ ಮಾರಕ ವರ್ಷ

ಕಳೆದ ಎರಡು ತಿಂಗಳಲ್ಲಿ ಇದು ಮೂರನೇ ಲೈಂಗಿಕ ಕಿರುಕುಳದ ಆರೋಪ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿಂದೆ ಇಂತದ್ದೆ ಕೆಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಕಳೆದ ನವೆಂಬರ್ 20ರಂದು ಇದೇ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ವಿಚಾರವನ್ನು ಅವರ ಸ್ನೇಹಿತರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದಾದ ಬಳಿಕ ಡಿಸೆಂಬರ್ 7ರಂದು ರಾಜಾಜಿನಗರ ಮೆಟ್ರೋ ಹತ್ತಿದ್ದ ಯುವತಿಯೊಬ್ಬರಿಗೆ ಲೋಕಿ ಎಂಬ ವ್ಯಕ್ತಿಯು ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಈ ವಿಚಾರವನ್ನು ಭದ್ರತಾ ಸಿಬ್ಬಂದಿಗೆ ತಿಳಿಸಿದ್ದು, ಅವರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿತ್ತು. ಹೀಗೆ ನಡೆದ ಕೆಲವು ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರಿವೆ.ಇನ್ನಾದರೂ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೆಟ್ರೋದಲ್ಲಿ, ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಒದಗಿಸಬೇಕು. ಈ ಬಗ್ಗೆ ಖಾತ್ರಿ ಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಬೆಂಗಳೂರು

ಈ ವಿಡಿಯೋ ನೋಡಿಹಿಟ್ & ರನ್ ಪ್ರಕರಣಗಳ ಹೊಸ ಕಾನೂನಿಗೇಕೆ ಇಷ್ಟು ವಿರೋಧ? ಚಾಲಕರಿಗೆ ಇದು ತೂಗುಕತ್ತಿಯೇ?

 

Donate Janashakthi Media

Leave a Reply

Your email address will not be published. Required fields are marked *