ಅಂಗನವಾಡಿಗೆ ಕಳಪೆ ಮೊಟ್ಟೆ ವಿತರಣೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಿ – ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ವಿತರಿಸುವ ಮೊಟ್ಟೆಗಳು ಕಳಫೆಯಾಗುವ ಎಂದು‌ ದೂರು ಬರುತ್ತಿವೆ. ಕಳಪೆ ಮೊಟ್ಟೆ ನೀಡಿದ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ, ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಮೊಟ್ಟೆ ವಿತರಕರ ಪಟ್ಟಿಯಿಂದಲೂ ಅವರನ್ನು  ಕೈಬಿಡಲಾಗುವುದು ಎಂದು ಹೇಳಿದ್ದಾರೆ.ಮೊಟ್ಟೆ ಖರೀದಿ ವಿಕೇಂದ್ರೀಕರಣ ಮಾಡಿದ್ದರಿಂದಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲೂ ಮೊಟ್ಟೆ ಖರೀದಿಯಾಗುತ್ತಿದೆ. ಯಾವುದೇ ಕಂಟ್ರೋಲ್ ಇಲ್ಲದೇ ಖರೀದಿ ನಡೆಯುತ್ತಿದೆ. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂಬುದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಖ್ಯ ಉದ್ದೇಶ. ನಮ್ಮ ಇಲಾಖೆಯ ಉದ್ದೇಶವೇ ಎಡವುತ್ತಿರುವುದು ಗಮನಕ್ಕೆ ಬಂದಿದೆ. ಕಳಪೆ ಮೊಟ್ಟೆ ವಿತರಣೆ ವಿಚಾರ ಕ್ಯಾಬಿನೆಟ್‌ನಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು.

ಹಾಸನ, ರಾಮನಗರ, ಕೊಡಗು, ಉತ್ತರ ಕರ್ನಾಟಕದ ಬಹಳಷ್ಟು ಜಿಲ್ಲೆಗಳಲ್ಲಿ ಕಳಪೆ ಮೊಟ್ಟೆ ಪೂರೈಕೆಯಾಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಖರೀದಿ ವ್ಯವಸ್ಥೆಯನ್ನು ಕೇಂದ್ರೀಕರಣಗೊಳಿಸಲು ಕ್ರಮವಹಿಸಲಾಗುವುದು. ಸರ್ಕಾರಿ ಸಂಸ್ಥೆಗಳಿಂದ ಖರೀದಿಗೆ ಚಿಂತನೆ ನಡೆಯುತ್ತಿದೆ.ಈ ಬಗ್ಗೆ ಕೂಲಂಕಷವಾಗಿ ಪರೀಶೀಲಿಸಿ ನಿರ್ಧರಿಸಲಾಗುವುದು ಎಂದೂ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇದನ್ನೂ ಓದಿ:ಜುಲೈ 10: ಸರ್ಕಾರಕ್ಕೆ 63 ಸಾವಿರ ಮೊಬೈಲ್‌ಗಳನ್ನು ವಾಪಾಸು ಮಾಡಲಿರುವ ಅಂಗನವಾಡಿ ಕಾರ್ಯಕರ್ತೆಯರು!

ರಾಜ್ಯದ ಕೆಲ ಅಂಗನವಾಡಿಗಳಲ್ಲಿ ಕೊಳೆತ ಮೊಟ್ಟೆಗಳನ್ನು ಗರ್ಭಿಣಿ, ಬಾಣಂತಿ,ಮತ್ತು ಮಕ್ಕಳಿಗೆ ನೀಡಲಾಗುತ್ತಿದೆ. ಅಂಗನವಾಡಿಗಳಲ್ಲಿ ನೀಡಲಾದ ಮೊಟ್ಟೆಗಳನ್ನು ಗರ್ಭಿಣಿ ಮಹಿಳೆಯರು ಮನೆಗೆ ತೆಗೆದುಕೊಂಡು ಹೋಗಿ ಬೇಯಿಸಿದಾಗ ಕೊಳೆತು ಹೋಗಿರುವುದು ಕಂಡು ಬಂದಿದೆ.

ಕೊಡಗು ಕುಶಾಲನಗರ ತಾಲೂಕಿನ ಬಸವನತ್ತೂರು ಗ್ರಾಮದ ಅಂಗನವಾಡಿಯಲ್ಲಿ ಕೊಳೆತ ಮೊಟ್ಟೆಗಳನ್ನು ಪೂರೈಕೆ ಮಾಡಲಾಗಿದೆ. ಹಾಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವಿರುದ್ದ ಅಲ್ಲಿನ ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದ್ದನ್ನು ಸ್ಮರಿಸಿಕೊಳ್ಳಬಹುದಾಗಿದೆ.

Donate Janashakthi Media

Leave a Reply

Your email address will not be published. Required fields are marked *