ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆ

ಬೆಂಗಳೂರು: ಮಂಗಳವಾರದಂದು ರಾಜ್ಯ ಪತ್ರದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಅನುಮೋದನೆಯನ್ನು ಜನವರಿ 2ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಲಾಗಿತ್ತು. ಇದೀಗ ಧಾರವಾಡ ಮಹಾನಗರ ಪಾಲಿಕೆ ಮತ್ತು ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿ, ಗಡಿ ಪರಿಮಿತಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಕೊರಗ ಸಮುದಾಯದ ಆದಿವಾಸಿ ಆಕ್ರೋಶ ರ‍್ಯಾಲಿ – ಬೃಂದಾ ಕಾರಟ್ ಭಾಗಿ

ಅಧಿಸೂಚನೆ ಬಗ್ಗೆ ಯಾವುದೇ ಆಕ್ಷೇಪಣೆ, ಸಲಹೆಗಳಿದ್ದಲ್ಲಿ 30 ದಿನದಲ್ಲಿ ಸಲ್ಲಿಸಬಹುದಾಗಿದೆ. ನಿರ್ದೇಶಕರು, ಪೌರಾಡಳಿತ ನಿರ್ದೇಶನಾಲಯ, 9ನೇ ಮಹಡಿ, ವಿವಿ ಗೋಪುರ, ಬೆಂಗಳೂರು ವಿಳಾಸಕ್ಕೆ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಬಹುದು. ಈ ಮೂಲಕ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ದಶಕಗಳಿಂದ ಇದ್ದ ಬೇಡಿಕೆ ಈಡೇರಿದಂತಾಗಿದೆ.

ಇದನ್ನೂ ನೋಡಿ: ಮಕ್ಕಳ ಬಹುರೂಪಿ ಬೆಳೆಯಲಿ – ಪ್ರಕಾಶ್‌ ರಾಜ್‌ Janashakthi Media

Donate Janashakthi Media

Leave a Reply

Your email address will not be published. Required fields are marked *