ಮಣಿಪುರ| ಮುಖ್ಯಮಂತ್ರಿ ಸಭೆಗೆ ಹಾಜರಾಗದಂತೆ ಶಾಸಕರಿಗೆ ಸೂಚಿಸಿದ ಎನ್‌ಪಿಪಿ

ಇಂಫಾಲ್: ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮಣಿಪುರ ಘಟಕವು ತನ್ನ ಶಾಸಕರಿಗೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಸರ್ಕಾರ ಕರೆಯುವ ಯಾವುದೇ ಸಭೆಗಳಿಗೆ ಹಾಜರಾಗದಂತೆ ಸೂಚನೆ ನೀಡಿದೆ.

ಈ ನಿರ್ಧಾರವನ್ನು ಪಕ್ಷದ ಎಲ್ಲಾ ಶಾಸಕರು  ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ, ಯಾವುದೇ ಅಧಿಕೃತ ಹೇಳಿಕೆಗಳನ್ನು ನೀಡುವ ಮೊದಲು ಅಥವಾ ಈ ವಿಷಯದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಅನುಮತಿ ಪಡೆಯಬೇಕು ಎಂದು ಎನ್‌ಪಿಪಿ ರಾಜ್ಯಾಧ್ಯಕ್ಷ ಎನ್.ಕೈಸಿ ತಿಳಿಸಿದ್ದಾರೆ. ಮುಖ್ಯಮಂತ್ರಿ 

ಇದನ್ನೂ ಓದಿ: ಬೈಕ್ ಪಾರ್ಕಿಂಗ್ ವಿಚಾರಕ್ಕೆ ಗಲಾಟೆ; ಚಾಕುವಿನಿಂದ ಹಲ್ಲೆ ನಡೆಸಿದ ವಿದ್ಯಾರ್ಥಿಗಳು

ನವೆಂಬರ್ 18ರಂದು ಸಿಎಂ ಬಿರೇನ್ ಸಿಂಗ್ ಕರೆದಿದ್ದ ಎನ್‌ಡಿಎ ಸಭೆಯಲ್ಲಿ ಮೂವರು ಎನ್‌ಪಿಪಿ ಶಾಸಕರು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷ ಹೊಸ ನಿರ್ದೇಶನ ನೀಡಿದೆ.

ಮಣಿಪುರ ವಿಧಾನಸಭೆಯಲ್ಲಿ ಏಳು ಮಂದಿ ಶಾಸಕರ ಬಲ ಹೊಂದಿರುವ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಬಿರೇನ್ ಸಿಂಗ್ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಈಚೆಗೆ ಹಿಂಪಡೆದಿತ್ತು. ಮೈತೆಯಿ ಹಾಗೂ ಕುಕಿ ಸಮುದಾಯಗಳ ನಡುವೆ ಉದ್ಭವಿಸಿರುವ ಬಿಕ್ಕಟ್ಟನ್ನು ಶಮನಗೊಳಿಸುವಲ್ಲಿ ಸರ್ಕಾರವು ಸಂಪೂರ್ಣವಾಗಿ ವಿಫಲಗೊಂಡಿದೆ ಎಂದು ಎನ್‌ಪಿಪಿ ಆರೋಪಿಸಿತ್ತು.

60 ಸದಸ್ಯ ಬಲದ ಮಣಿಪುರ ವಿಧಾನಸಭೆಯಲ್ಲಿ ಎನ್‌ಪಿಪಿ 7 ಶಾಸಕರನ್ನು ಹೊಂದಿದೆ. ಬಿಜೆಪಿ 32 ಶಾಸಕರನ್ನು ಹೊಂದಿದೆ. ಹಾಗಾಗಿ, ಸರ್ಕಾರಕ್ಕೆ ಅಸ್ಥಿರತೆ ಕಾಡುವುದಿಲ್ಲ.

ಇದನ್ನೂ ನೋಡಿ: ಆರ್‌.ಬಿ. ಮೋರೆ | ಈ ಪುಸ್ತಕ ದೃಶ್ಯಗಳನ್ನು ಕಟ್ಟಿಕೊಟ್ಟಿದ್ದರಿಂದ ಸರಳವಾಗಿ ಅನುವಾದಿಸಿದೆ – ಅಬ್ದುಲ್ ರೆಹಮಾನ ಪಾಷಾ

Donate Janashakthi Media

Leave a Reply

Your email address will not be published. Required fields are marked *