ಇಂಡಿ| ಅಭಿರುಚಿ ಆಧಾರಿತ ಶಿಕ್ಷಣವೇ ಭವಿಷ್ಯದ ದಾರಿ: ಯಶವಂತರಾಯಗೌಡ ಪಾಟೀಲ

ಇಂಡಿ: ಇಂದಿನ ಆಧುನಿಕ ತಂತ್ರಜ್ಞಾನದೊಂದಿಗೆ ಮಕ್ಕಳ ಮೇಲೆ ಒತ್ತಡ ಹೇರದೇ ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡುವುದರೊಂದಿಗೆ, ಮಕ್ಕಳನ್ನು ಅಣಿಗೊಳಿಸಿದಾಗ ಮಾತ್ರ ಈ ನಮ್ಮ ನಿಂಬೆನಾಡಿನ ಮಕ್ಕಳ ಸಾಧನೆ ನಾಡು ನೋಡುವಂತಾಗುತ್ತದೆ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಫೌಂಡೇಶನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ : ಕೇರಳ | ಅಭಿವೃದ್ಧಿ ಹಬ್ಬ: ರೈಲು ಸಂಪರ್ಕ, ವಿಜ್ಞಾನ–ನವೋದ್ಯಮ ಯೋಜನೆಗಳಿಗೆ ಪ್ರಧಾನಿ ಚಾಲನೆ

ಯಶಸ್ಸು ಸಾಧಿಸಬೇಕು’ ‘ವಿದ್ಯಾರ್ಥಿಗಳು 23ನೇ ವಯಸ್ಸಿನವರೆಗೂ ಕೇವಲ ಪುಸ್ತಕದ ಗೆಳೆತನ ಮಾಡಿ, ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ ಹೇಳಿದರು.ಫೌಂಡೇಶನ್ ಕಾರ್ಯಧ್ಯಕ್ಷೆ ಶಿವಲೀಲಾ ಪಾಟೀಲ, ಪ್ರಾಸ್ತಾವಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಮುಜಾವರ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ ಮಾತನಾಡಿದರು.

ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವರಾಜ ಬಿರಾದಾರ ಹಾಗೂ ತಂಡದವರು ರಚಿಸಿದ ‘ಯಶೋಗಾಥೆ’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.

ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಭೀಮಣ್ಣ ಕವಲಗಿ, ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ್ ಬಿ.ಎಸ್.ಕಡಕಬಾವಿ, ರಮೇಶ.ಆರ್. ಎಚ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಮುಜಾವರ್, ಸಮನ್ವಯಾಧಿಕಾರಿ ಎಸ್.ಆರ್.ನಡಗಡ್ಡಿ ಇದ್ದರು.ತಾಲ್ಲೂಕಿನ 80 ಪ್ರೌಢಶಾಲೆಗಳ ಮುಖ್ಯಶಿಕ್ಷಕರು , ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

ಇದನ್ನೂ ನೋಡಿ : “ದುಡಿಯುವ ವರ್ಗದ ಆಕ್ರೋಶ: ಫೆಬ್ರವರಿ 12ಕ್ಕೆ ಸಾರ್ವತ್ರಿಕ ಮುಷ್ಕರ ಘೋಷಣೆ” Janashakthi Media

Donate Janashakthi Media

Leave a Reply

Your email address will not be published. Required fields are marked *