ಕರ್ನಾಟಕದ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳ

ಬೆಂಗಳೂರು:  ಬೆಂಗಳೂರಿನಲ್ಲಿ ಕೆಲ ದಿನಗಳಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿದೆ. ಪ್ರಕರಣ

ಇದನ್ನೂ ಓದಿ:ಡೆಂಗ್ಯೂ ನಿಯಂತ್ರಣಕ್ಕೆ ರೋಗ ಕಣ್ಗಾವಲು ಡ್ಯಾಶ್‌ಬೋರ್ಡ್ ಮೊಬೈಲ್ ಅಪ್ಲಿಕೇಶನ್ ಬಿಡುಗಡೆ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ 103 ಡಿಗ್ರಿ, 104 ಡಿಗ್ರಿ ಜ್ವರದಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ನಮ್ಮ ವಾರ್ಡ್‌ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *